13 ವರ್ಷಗಳ ಬಳಿಕ ಪೊಲೀಸರ ಬಲೆಗೆ! ವಾರೆಂಟ್ ಆರೋಪಿ ಕೊನೆಗೂ ಬಂಧನ!
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಭದ್ರಾವತಿ: ನ್ಯೂ ಟೌನ್ ಪೊಲೀಸ್ ಠಾಣೆಯ 2010ನೇ ಸಾಲಿನ ಕಲಂ 379 ಐಪಿಸಿ ಪ್ರಕರಣದಲ್ಲಿ ಕಳೆದ 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ನ್ಯೂ ಟೌನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ನಿವಾಸಿ ಮಂಜುನಾಥ ಎಂಬಾತನ ವಿರುದ್ಧ ಭದ್ರಾವತಿಯ ಘನ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಸಿಸಿ ನಂ. 1790/2010ರ ಪ್ರಕರಣದಲ್ಲಿ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.
ಈ ಹಿನ್ನೆಲೆಯಲ್ಲಿ ನ್ಯೂ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ, ವಾರೆಂಟ್ ಆಸಾಮಿ ಮಂಜುನಾಥನನ್ನು ದಸ್ತಗಿರಿ ಮಾಡಿದೆ.
ಬಂಧಿತ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ವರದಿನ ನದೀಮ್ ಕೆಎಂ



Comments
Post a Comment