ಭದ್ರಾವತಿಯಲ್ಲಿ ಭರ್ಜರಿ ಪೊಲೀಸ್ ಕಾರ್ಯಾಚರಣೆ! ತಡಸ ಮನೆ ಕಳ್ಳತನ ಪ್ರಕರಣ ಭೇದಿಸಿ, ₹6.89 ಲಕ್ಷ ಮೌಲ್ಯದ ಚಿನ್ನಾಭರಣ ವಶ!

 

ಭದ್ರಾವತಿಯಲ್ಲಿ ಭರ್ಜರಿ ಪೊಲೀಸ್ ಕಾರ್ಯಾಚರಣೆ: ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು 



ಭದ್ರಾವತಿ: ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಡಸ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ವಶಕ್ಕೆ ಪಡೆದು ಲಕ್ಷಾಂತರ ರೂಪಾಯಿ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಆಗಸ್ಟ್ 17ರಂದು ತಡಸ ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಅಡುಗೆ ಕೋಣೆಯ ವೆಂಟಿಲೇಟರ್ ಮೂಲಕ ಮನೆಯೊಳಗೆ ಪ್ರವೇಶಿಸಿ, ಸುಮಾರು 6.39 ಲಕ್ಷ ರೂಪಾಯಿ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು.



ಈ ಕುರಿತು ನೀಡಲಾದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 177/2026, ಬಿ.ಎನ್.ಎಸ್ ಕಾಯ್ದೆಯ ಕಲಂ 331(3), 305(A) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಲು ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ನಿಖಿಲ್. ಬಿ., ಐಪಿಎಸ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕಾರಿಯಪ್ಪ ವಿ.ಜಿ. ಅವರ ಸಹಕಾರ ಹಾಗೂ ಭದ್ರಾವತಿ ಉಪವಿಭಾಗದ ಡಿವೈಎಸ್‌ಪಿ ಪ್ರಕಾಶ್ ರಾಥೋಡ್ ಅವರ ಮೇಲ್ವಿಚಾರಣೆಯಲ್ಲಿ ವಿಶೇಷ ತಂಡ ರಚಿಸಲಾಗಿತ್ತು.

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಚಿದಾನಂದ, ಪಿಎಸ್ಐ ಶಿಲ್ಪಾ ನಾಯನೇಗಲಿ, ಪಿಎಸ್ಐ ಮಹೇಶ್, ಎಎಸ್‌ಐಗಳಾದ ವೆಂಕಟೇಶ್, ರವಿಕುಮಾರ್, ಚಂದ್ರಶೇಖರ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್, ಅರುಣ್ ಕುಮಾರ್, ಈರಯ್ಯ ಮತ್ತು ವಿಜಯ್ ಕುಮಾರ್ ಒಳಗೊಂಡ ತಂಡ ಆರೋಪಿಗಳ ಪತ್ತೆ ಕಾರ್ಯಾಚರಣೆ ನಡೆಸಿತ್ತು

.


ಸತತ ಕಾರ್ಯಾಚರಣೆಯ ಫಲವಾಗಿ ಆಗಸ್ಟ್ 19ರಂದು ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಅವರಿಂದ ಪ್ರಕರಣಕ್ಕೆ ಸಂಬಂಧಿಸಿದ 6,89,965 ರೂಪಾಯಿ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣಗಳನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.

ಕಳ್ಳತನ ಪ್ರಕರಣವನ್ನು ತ್ವರಿತವಾಗಿ ಭೇದಿಸಿ, ಕಳುವಾಗಿದ್ದ ಆಭರಣಗಳನ್ನು ಪತ್ತೆಹಚ್ಚಿದ ಪೊಲೀಸ್ ತಂಡದ ಕಾರ್ಯಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಈ ಕಾರ್ಯಾಚರಣೆಯಿಂದ ತಡಸ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಹತ್ವದ ಯಶಸ್ಸು ಸಾಧಿಸಿದ್ದಾರೆ.


ವರದಿ ನದೀಮ್ ಕೆ ಎಂ 



Comments

Popular posts from this blog

ರಾಗಿಗುಡ್ಡದಲ್ಲಿ ಭಕ್ತಿಭಾವದ ಸಂದಲ್ ಶರೀಫ್: ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ

ಶಾಂತಿನಗರದಲ್ಲಿ ಈದ್ ಮೀಲಾದ್–ಗಣೇಶ ಹಬ್ಬದ ಪ್ರಯುಕ್ತ ಶಾಂತಿಸಭೆ

1995ರ ನಂತರದ ಕನ್ನಡ ಶಾಲೆಗಳ ಉಳಿವಿಗೆ ಸಚಿವರ ಮಹತ್ವದ ಭರವಸೆ