ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಿ: ಶಾಸಕ ಡಿ.ಎಸ್. ಅರುಣ್

ಶಿವಮೊಗ್ಗ, ಆ. 3: ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಜನರನ್ನು ದೀರ್ಘಕಾಲದಿಂದ ಕಾಡುತ್ತಿರುವ ವಿವಿಧ ಮೂಲಭೂತ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ವಿಧಾನ ಪರಿಷತ್ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ ಅವರು ಅಧಿಕಾರಿಗಳಿಗೆ ಒತ್ತಾಯಿಸಿದರು.




ಸೋಮವಾರ ಅಪರ ಜಿಲ್ಲಾಧಿಕಾರಿ ಅಭಿಷೇಕ್ ಅವರನ್ನು ಭೇಟಿ ಮಾಡಿದ ಶಾಸಕ ಡಿ.ಎಸ್. ಅರುಣ್ ಅವರು, ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸಮಸ್ಯೆಗಳ ಕುರಿತು ಸಮಗ್ರ ಮನವಿ ಸಲ್ಲಿಸಿದರು.


ಮನವಿಯಲ್ಲಿ ಈ-ಸ್ವತ್ತು ಸಮಸ್ಯೆ, ಕುಡಿಯುವ ನೀರಿನ ಅವ್ಯವಸ್ಥೆ, ರಸ್ತೆ ಹಾಗೂ ಚರಂಡಿಗಳ ಅಭಿವೃದ್ಧಿ, ಸ್ವಚ್ಛತಾ ವ್ಯವಸ್ಥೆಯ ಕೊರತೆ ಸೇರಿದಂತೆ ಸಾರ್ವಜನಿಕರನ್ನು ಕಾಡುತ್ತಿರುವ ವಿವಿಧ ಸಮಸ್ಯೆಗಳನ್ನು ಪ್ರಸ್ತಾಪಿಸಿ, ಅವುಗಳನ್ನು ಆದ್ಯತೆಯ ಮೇರೆಗೆ ಪರಿಶೀಲಿಸಿ ಶೀಘ್ರದಲ್ಲಿ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿದರು.


ಸಾರ್ವಜನಿಕರ ಹಿತಾಸಕ್ತಿಗೆ ಸಂಬಂಧಿಸಿದ ಯಾವುದೇ ವಿಷಯವನ್ನು ನಿರ್ಲಕ್ಷಿಸದೆ, ಜನರ ದೈನಂದಿನ ಬದುಕಿಗೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಿ ಮೂಲಸೌಕರ್ಯಗಳನ್ನು ಸುಧಾರಿಸಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.




ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಮಲ್ಲೇಶಪ್ಪ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯ್ಡು, ಮುಖಂಡರಾದ ಸತೀಶ್, ವೆಂಕಟೇಶ್ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರು


ವರದಿ  ನದೀಮ್ ಕೆ ಮ್

Comments

Post a Comment