ಶಿವಮೊಗ್ಗ ಜಿಲ್ಲಾ ಮೋಚಿಗರ ಸಂಘದಿಂದ ಮೊದಲನೇ ವರ್ಷದ ಪ್ರತಿಭಾ ಪುರಸ್ಕಾರ
ಶಿವಮೊಗ್ಗ ನಗರದ ಅಶ್ವತ್ ನಗರದಲ್ಲಿರುವ ಶಿವಮೊಗ್ಗ ಜಿಲ್ಲಾ ಮೋಚಿಗರ ಸಭಾಭವನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮೋಚಿಗರ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಐದು ವಿದ್ಯಾರ್ಥಿಗಳಾದ ಸಿಂಚನ ಜಿ., ಪ್ರಾರ್ಥನಾ ಎ., ತನು ಎನ್., ಆದ್ಯ ಎಸ್.ಜಿ. ಹಾಗೂ ನಂದಿತಾ ಆರ್. ಅವರನ್ನು ಸನ್ಮಾನಿಸಿ, ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.
ಮೋಚಿಗರ ಸಂಘದ ಅಧ್ಯಕ್ಷರಾದ ಎಸ್. ರಾಜು, ಜಿಲ್ಲಾ ಗೌರವಾಧ್ಯಕ್ಷರಾದ ಎಂ. ಶಿವಣ್ಣ ಹಾಗೂ ಮಾಜಿ ಅಧ್ಯಕ್ಷರಾದ ಎಸ್. ಮಲ್ಲಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಎಸ್.ಪಿ. ಶಿವಕುಮಾರ್ ಅವರು ಯಶಸ್ವಿಯಾಗಿ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಎಸ್. ರಾಜು ಅವರು ಸಂಘದ ಕಟ್ಟಡದ ಅಭಿವೃದ್ಧಿಗಾಗಿ ₹25,000 ದೇಣಿಗೆ ನೀಡಿದರು. ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರೂ ಕೈಜೋಡಿಸಬೇಕೆಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪ್ರೋತ್ಸಾಹ ಧನ ಪಡೆದ ವಿದ್ಯಾರ್ಥಿಗಳ ಪೋಷಕರು, ಸಂಘದ ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ವರದಿ ನದೀಮ್ ಕೆಎಂ



Comments
Post a Comment