ಶಾಂತಿನಗರದಲ್ಲಿ ಈದ್ ಮೀಲಾದ್–ಗಣೇಶ ಹಬ್ಬದ ಪ್ರಯುಕ್ತ ಶಾಂತಿಸಭೆ
ಶಿವಮೊಗ್ಗ: ಶಾಂತಿನಗರ ರಾಗಿಗುಡ್ಡದಲ್ಲಿ ಈದ್ ಮೀಲಾದ್ ಹಾಗೂ ಗಣೇಶ ಹಬ್ಬದ ಪ್ರಯುಕ್ತ ಶಾಂತಿಸಭೆಯನ್ನು ಆಯೋಜಿಸಲಾಯಿತು.
ಸಭೆಯಲ್ಲಿ ಶಾಂತಿನಗರಕ್ಕೆ ಮೊದಲ ಬಾರಿಗೆ ಆಗಮಿಸಿದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಬಿ. ಅವರನ್ನು ಶಾಂತಿನಗರದ ಜನತೆಯ ಪರವಾಗಿ ಶಹಾಬುದ್ದಿನ್ ಬಾಬು ಅವರ ನೇತೃತ್ವದಲ್ಲಿ ಮುಖಂಡರು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಶಾಂತಿನಗರದ ಮುಖಂಡರಾದ ನಾಗರಾಜಣ್ಣ, ನೂರ್ ಮಸೀದಿ ಅಧ್ಯಕ್ಷರಾದ ಭಾಷಸಾಬ್ ಹುಣಸಘಟ್ಟ, ವಕೀಲರಾದ ರಾಮಚಂದ್ರ, ಶಾಂತಿನಗರ ನಾಗರಿಕ ಹಕ್ಕುಗಳ ವೇದಿಕೆ ಅಧ್ಯಕ್ಷರಾದ ಸಯ್ಯದ್ ಮುಜಿಬುಲ್ಲ, ಬಸವರಾಜ್, ಮಹಾನಗರಪಾಲಿಕೆ ಮಾಜಿ ಸದಸ್ಯರಾದ ಧೀರರಾಜ್ ಹೊನ್ನವಿಲೇ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಸಭೆಯಲ್ಲಿ DYSP ಸಂಜೀವಕುಮಾರ್ ಹಾಗೂ CPI ರಾಘವೇಂದ್ರ ಅವರು ಭಾಗವಹಿಸಿದ್ದರು.
ಈದ್ ಮೀಲಾದ್ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಯಿತು. ವಿವಿಧ ಸಮಾಜಗಳ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ, ಪ್ರದೇಶದ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ಕುರಿತು ತಮ್ಮ ಅಮೂಲ್ಯ ಸಲಹೆಗಳನ್ನು ನೀಡಿದರು.
ಎಲ್ಲಾ ಸಮಾಜಗಳ ಮುಖಂಡರು ಹಾಗೂ ಸಾರ್ವಜನಿಕರು ಒಗ್ಗೂಡಿ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸುವ ಮೂಲಕ ಶಾಂತಿನಗರದಲ್ಲಿ ಸೌಹಾರ್ದತೆಯ ವಾತಾವರಣವನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.
ವರದಿ ನದೀಂ ಕೆಎಂ



Comments
Post a Comment