ಬಿಜೆಪಿಗೆ ಪ್ರಜಾಪ್ರಭುತ್ವದ ಗೌರವವಿಲ್ಲ! ಸದನಕ್ಕೆ ಅಡ್ಡಿ: ಸಚಿವ ಮಧು ಬಂಗಾರಪ್ಪ ಕಿಡಿ

 ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿ




ಬೆಂಗಳೂರು, ಆ.21: ವಿಧಾನಮಂಡಲದ ಕಲಾಪಕ್ಕೆ ಬಿಜೆಪಿ ಶಾಸಕರು ಉದ್ದೇಶಪೂರ್ವಕವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದಾರೆ.


ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಸಚಿವ ಮಧು ಬಂಗಾರಪ್ಪ ಭಾಗವಹಿಸಿದ್ದರು.


ಈ ವೇಳೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ, ಶಿಕ್ಷಣ, ರೈತರು, ಯುವಜನರು ಹಾಗೂ ಜನಸಾಮಾನ್ಯರ ಸಮಸ್ಯೆಗಳ ಕುರಿತು ವಿಧಾನಮಂಡಲದಲ್ಲಿ ಸಮಗ್ರ ಚರ್ಚೆ ನಡೆಯಬೇಕಿದೆ. ಆದರೆ ಬಿಜೆಪಿ ಸದಸ್ಯರು ಸದನದ ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಬಿಜೆಪಿಗೆ ರಾಜ್ಯದ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸಲು ಆಸಕ್ತಿ ಇಲ್ಲ. ಜನರ ಸಮಸ್ಯೆಗಳಿಗಿಂತ ಬಿಜೆಪಿಗೆ ತನ್ನ ಪ್ರತಿಷ್ಠೆಯೇ ಮುಖ್ಯವಾಗಿದೆ ಎಂದು ಸಚಿವರು ಆರೋಪಿಸಿದರು.


ಯಾವುದೇ ವಿಷಯದ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿದೆ. ಆದರೆ ಪ್ರತಿಪಕ್ಷವು ರಚನಾತ್ಮಕ ಚರ್ಚೆಗೆ ಮುಂದಾಗದೆ ಸದನದ ಕಲಾಪವನ್ನು ಅಡ್ಡಿಪಡಿಸುವುದನ್ನೇ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದೆ ಎಂದು ಮಧು ಬಂಗಾರಪ್ಪ ದೂರಿದರು.


ವಿಧಾನಮಂಡಲದ ಕಲಾಪ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ರಾಜ್ಯದ ಅಭಿವೃದ್ಧಿಗೆ ಅಗತ್ಯವಾದ ನೀತಿ-ನಿರ್ಧಾರಗಳನ್ನು ರೂಪಿಸಲು ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಪ್ರತಿಪಕ್ಷವೂ ಜವಾಬ್ದಾರಿಯುತವಾಗಿ ನಡೆದುಕೊಂಡು ಸದನದ ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವರು ಹೇಳಿದರು.


ಬಿಜೆಪಿ ನಡೆಯಿಂದ ಆ ಪಕ್ಷಕ್ಕೆ ಪ್ರಜಾತಾಂತ್ರಿಕ ವ್ಯವಸ್ಥೆಯ ಮೇಲೆ ಗೌರವವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.


ವರದಿ ನದೀಮ್ ಕೆ ಮ್




Comments

Popular posts from this blog

ರಾಗಿಗುಡ್ಡದಲ್ಲಿ ಭಕ್ತಿಭಾವದ ಸಂದಲ್ ಶರೀಫ್: ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ

ಶಾಂತಿನಗರದಲ್ಲಿ ಈದ್ ಮೀಲಾದ್–ಗಣೇಶ ಹಬ್ಬದ ಪ್ರಯುಕ್ತ ಶಾಂತಿಸಭೆ

1995ರ ನಂತರದ ಕನ್ನಡ ಶಾಲೆಗಳ ಉಳಿವಿಗೆ ಸಚಿವರ ಮಹತ್ವದ ಭರವಸೆ