ಗಾಂಧಿ ಪಾರ್ಕ್ ಅಭಿವೃದ್ಧಿಗೆ ಶಾಸಕರ ಕಟ್ಟುನಿಟ್ಟಿನ ಸೂಚನೆ

 



ಗಾಂಧಿ ಪಾರ್ಕ್ ಅಭಿವೃದ್ಧಿಗೆ ಶಾಸಕರ ಕಟ್ಟುನಿಟ್ಟಿನ ಸೂಚನೆ

ಶಿವಮೊಗ್ಗ ನಗರದ ಗಾಂಧಿ ಪಾರ್ಕ್‌ನ ಮೂಲಸೌಕರ್ಯಗಳ ಸುಧಾರಣೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ಶಾಸಕ ಎಸ್. ಎನ್. ಚನ್ನಬಸಪ್ಪ (ಚೆನ್ನಿ) ಅವರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


ಶಾಸಕರು ಪಾರ್ಕ್‌ಗೆ ಭೇಟಿ ನೀಡಿ, ಫೌಂಟೆನ್, ಈಜುಕೊಳ, ಮಕ್ಕಳ ರೈಲು ಹಾಗೂ ಆಟಿಕೆಗಳ ದುರಸ್ತಿ ಕಾಮಗಾರಿಗಳನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಸೂಚಿಸಿದರು.



ಈಜುಕೊಳವನ್ನು ಸಾರ್ವಜನಿಕರ ಬಳಕೆಗೆ ತರಲು, ಮಕ್ಕಳ ರೈಲು ದುರಸ್ತಿಗೊಳಿಸಲು ಹಾಗೂ ಪಾರ್ಕ್‌ನ ಕೊಳವನ್ನು ಅಭಿವೃದ್ಧಿಪಡಿಸಲು ನಿರ್ದೇಶನ ನೀಡಿದರು.



ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವರದಿ ನದೀಮ್ ಕೆ ಮ್ 




Comments

Popular posts from this blog

ರಾಗಿಗುಡ್ಡದಲ್ಲಿ ಭಕ್ತಿಭಾವದ ಸಂದಲ್ ಶರೀಫ್: ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ

ಶಾಂತಿನಗರದಲ್ಲಿ ಈದ್ ಮೀಲಾದ್–ಗಣೇಶ ಹಬ್ಬದ ಪ್ರಯುಕ್ತ ಶಾಂತಿಸಭೆ

1995ರ ನಂತರದ ಕನ್ನಡ ಶಾಲೆಗಳ ಉಳಿವಿಗೆ ಸಚಿವರ ಮಹತ್ವದ ಭರವಸೆ