ರಾಗಿಗುಡ್ಡದ ನ್ಯಾಯಬೆಲೆ ಅಂಗಡಿ ಮುಂದೆ ಸರ್ಕಾರಿ ಅಕ್ಕಿ ಖರೀದಿ? ಅಧಿಕಾರಿಗಳ ಪರಿಶೀಲನೆ ಅಗತ್ಯ

ರಾಗಿಗುಡ್ಡದಲ್ಲಿ ಸರ್ಕಾರಿ ಅಕ್ಕಿ ಖರೀದಿ ಆರೋಪ: ಅಧಿಕಾರಿಗಳು ಪರಿಶೀಲನೆ ನಡೆಸುವಂತೆ ಸ್ಥಳೀಯರ ಆಗ್ರಹ


 


ಶಿವಮೊಗ್ಗ: ನಗರದ ರಾಗಿಗುಡ್ಡದ ನಗರತ್ನಂ ಬಡಾವಣೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಸರ್ಕಾರಿ ಪಡಿತರ ಅಕ್ಕಿಯನ್ನು ಕೆಲವರು ಖರೀದಿಸುತ್ತಿರುವ ದೃಶ್ಯ ಕಂಡುಬಂದಿದೆ.


ಒಂದು–ಎರಡು ಆಟೋ ಹಾಗೂ ಬೈಕ್‌ಗಳಲ್ಲಿ ಬಂದ ಕೆಲವರು ನ್ಯಾಯಬೆಲೆ ಅಂಗಡಿಯ ಬಳಿ ಅಕ್ಕಿಯನ್ನು ಖರೀದಿಸುತ್ತಿರುವ ದೃಶ್ಯ ಸ್ಥಳೀಯರ ಗಮನಕ್ಕೆ ಬಂದಿದೆ.


ಸರ್ಕಾರದಿಂದ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಖರೀದಿಸಿ, ನಂತರ ಬೇರೆಡೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ.


ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲೇ ಈ ರೀತಿಯಾಗಿ ಅಕ್ಕಿ ಖರೀದಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಈ ಕುರಿತು ಸಂಬಂಧಪಟ್ಟ ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕಾಗಿದೆ ಎಂಬುದು ಸ್ಥಳೀಯರ ಒತ್ತಾಯವಾಗಿದೆ.


ಅಕ್ಕಿಯನ್ನು ಯಾರು ಖರೀದಿಸುತ್ತಿದ್ದಾರೆ? ಯಾವ ಉದ್ದೇಶಕ್ಕಾಗಿ ಖರೀದಿಸಲಾಗುತ್ತಿದೆ? ಖರೀದಿಸಿದ ಅಕ್ಕಿ ಎಲ್ಲಿಗೆ ಸಾಗಿಸಲಾಗುತ್ತಿದೆ? ಎಂಬುದರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕಾಗಿದೆ.


ಅದೇ ರೀತಿ, ನ್ಯಾಯಬೆಲೆ ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಗಮನಕ್ಕೆ ಈ ವಿಚಾರ ಬಂದಿದೆಯೇ? ಬಂದಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆಯೇ? ಎಂಬುದನ್ನೂ ಪರಿಶೀಲಿಸಬೇಕಿದೆ.



ಬಡ ಮತ್ತು ಅರ್ಹ ಫಲಾನುಭವಿಗಳಿಗೆ ತಲುಪಬೇಕಾದ ಸರ್ಕಾರಿ ಪಡಿತರ ಅಕ್ಕಿ ನಿಯಮಬಾಹಿರವಾಗಿ ಬೇರೆಡೆಗೆ ಸಾಗಿಸಲಾಗುತ್ತಿದೆ ಎಂಬ ಆರೋಪದಲ್ಲಿ ಸತ್ಯಾಸತ್ಯತೆ ಏನು ಎಂಬುದನ್ನು ಅಧಿಕಾರಿಗಳು ತನಿಖೆ ನಡೆಸಿ ಸ್ಪಷ್ಟಪಡಿಸಬೇಕಾಗಿದೆ.


ಸರ್ಕಾರಿ ಪಡಿತರ ಅಕ್ಕಿಯ ದುರುಪಯೋಗ ನಡೆಯುತ್ತಿದೆಯೇ ಎಂಬ ಬಗ್ಗೆ ಸಂಬಂಧಪಟ್ಟ ಇಲಾಖೆ ತಕ್ಷಣ ಪರಿಶೀಲನೆ ನಡೆಸಿ, ಸತ್ಯಾಸತ್ಯತೆಯನ್ನು ಬಹಿರಂಗಪಡಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ವರದಿ ನದೀಮ್ ಕೆ ಎಂ 



Comments

Popular posts from this blog

ಗಣಪತಿಗೆ ಹೂವಿನ ಹಾರ ಅರ್ಪಿಸಿ, ನೀರು ಮತ್ತು ಜ್ಯೂಸ್ ವಿತರಣೆ

ರಾಗಿಗುಡ್ಡದಲ್ಲಿ ಭಕ್ತಿಭಾವದ ಸಂದಲ್ ಶರೀಫ್: ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ