ಶಿವಮೊಗ್ಗದಲ್ಲಿ ಪೊಲೀಸ್ ಅಲರ್ಟ್: ಈದ್ ಮಿಲಾದ್, ಗಣಪತಿ ಹಬ್ಬದ ಹಿನ್ನೆಲೆ ಭರ್ಜರಿ ಪಥಸಂಚಲನ ರಾಗಿಗುಡ್ಡದಲ್ಲಿ SAF–RAF ಪಡೆಗಳ ರೂಟ್ ಮಾರ್ಚ್

ಶಿವಮೊಗ್ಗದಲ್ಲಿ ಈದ್ ಮಿಲಾದ್, ಗಣಪತಿ ಹಬ್ಬದ ಹಿನ್ನೆಲೆ ಪೊಲೀಸ್ ಅಲರ್ಟ್





ಈದ್ ಮಿಲಾದ್ ಹಾಗೂ ಗಣಪತಿ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ಪೊಲೀಸ್ ಪಡೆಗಳಿಂದ ಪಥಸಂಚಲನ ನಡೆಸಲಾಯಿತು.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಯಿತು. ಈ ವೇಳೆ ಪೊಲೀಸ್ ತುಕಡಿ, SAF ಹಾಗೂ RAF ಪಡೆಗಳ ಸಿಬ್ಬಂದಿ ಭಾಗವಹಿಸಿದ್ದರು.



ಹಬ್ಬಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೂಕ್ಷ್ಮ ಪ್ರದೇಶಗಳಲ್ಲಿ ವಿಶೇಷ ಪೊಲೀಸ್ ಪಡೆಗಳಿಂದ ರೂಟ್ ಮಾರ್ಚ್ ನಡೆಸಲಾಯಿತು.

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಸೇರಿದಂತೆ SAF ಮತ್ತು RAF ಅಧಿಕಾರಿಗಳ ನೇತೃತ್ವದಲ್ಲಿ ಪಥಸಂಚಲನ ನಡೆಯಿತು.

ಈದ್ ಮಿಲಾದ್ ಹಾಗೂ ಗಣೇಶ ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.



ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಹಾಗೂ ಗಸ್ತು ಹೆಚ್ಚಿಸಲಾಗಿದ್ದು, ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.





ವರದಿ ನದೀಂ ಕೆ ಎಂ 





Comments