ಬೈಕ್ ಚಾಲಕನಿಗೆ 1 ವರ್ಷ 1 ತಿಂಗಳು 15 ದಿನ ಕಾರಾಗೃಹ ಶಿಕ್ಷೆ, ₹11 ಸಾವಿರ ದಂಡ

 

ಅನವೇರಿ ಕೈಮರ ರಸ್ತೆ ಅಪಘಾತ ಪ್ರಕರಣ



ಬೈಕ್ ಚಾಲಕನಿಗೆ 1 ವರ್ಷ 1 ತಿಂಗಳು 15 ದಿನ ಕಾರಾಗೃಹ ಶಿಕ್ಷೆ, ₹11 ಸಾವಿರ ದಂಡ

ಭದ್ರಾವತಿ: ಅನವೇರಿ ಕೈಮರ ರಸ್ತೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಚಾಲಕನಿಗೆ ನ್ಯಾಯಾಲಯವು ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.


2021ರ ಡಿಸೆಂಬರ್ 27ರಂದು ಭೋಜರಾಜ್ ಎಂಬವರು ಅನವೇರಿ ಕೈಮರ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ, ಆರೋಪಿ ನಿಖಿಲ್ ಎಂಬಾತನು ಬಜಾಜ್ ಪಲ್ಸರ್ ಬೈಕ್‌ನಲ್ಲಿ ಅನವೇರಿ ಕಡೆಯಿಂದ ಮಲ್ಲಾಪುರ ಕಡೆಗೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿಕೊಂಡು ಬಂದು ಭೋಜರಾಜ್ ಅವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಭೋಜರಾಜ್ ಅವರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು 27-12-2021ರಂದು ಮೃತಪಟ್ಟಿದ್ದರು.


ಈ ಸಂಬಂಧ ಮೃತರ ತಾಯಿ ನೀಡಿದ ದೂರಿನ ಮೇರೆಗೆ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.372/2021ರಂತೆ ಐಪಿಸಿ ಕಲಂ 279, 304(ಎ) ಹಾಗೂ 181, 187 ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.


ಪ್ರಕರಣದ ಅಂದಿನ ತನಿಖಾಧಿಕಾರಿಯಾಗಿದ್ದ ಲಕ್ಷ್ಮೀಪತಿ, ಪಿಐ ಅವರು ತನಿಖೆ ಪೂರ್ಣಗೊಳಿಸಿ ಆರೋಪಿಯ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.


ಪ್ರಕರಣದ ವಿಚಾರಣೆಯನ್ನು ಭದ್ರಾವತಿಯ 1ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆಸಲಾಗಿದ್ದು, ಸರ್ಕಾರದ ಪರವಾಗಿ ಅಪರ ಸರ್ಕಾರಿ ಅಭಿಯೋಜಕರಾದ ತಿಪ್ಪೇಶ್ ರಾವ್ ಅವರು ವಾದ ಮಂಡಿಸಿದ್ದರು.


ವಿಚಾರಣೆ ವೇಳೆ ಆರೋಪಿಯ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಮಾನ್ಯ 1ನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ಶ್ರೀಮತಿ ನಾಸಿರ ಭಾನು ಅವರು 17-09-2026ರಂದು ತೀರ್ಪು ಪ್ರಕಟಿಸಿದ್ದಾರೆ.


ಆರೋಪಿ ಬೈಕ್ ಚಾಲಕನಿಗೆ ಒಟ್ಟು 1 ವರ್ಷ 1 ತಿಂಗಳು 15 ದಿನಗಳ ಕಾರಾಗೃಹ ಶಿಕ್ಷೆ ಹಾಗೂ ₹11,000 ದಂಡ ವಿಧಿಸಿ ನ್ಯಾಯಾಲಯ ಆದೇಶಿಸಿದೆ.


ವರದಿ ನದೀಮ್ ಕೆ ಎಂ 



Comments

Popular posts from this blog

ರಾಗಿಗುಡ್ಡದ ನ್ಯಾಯಬೆಲೆ ಅಂಗಡಿ ಮುಂದೆ ಸರ್ಕಾರಿ ಅಕ್ಕಿ ಖರೀದಿ? ಅಧಿಕಾರಿಗಳ ಪರಿಶೀಲನೆ ಅಗತ್ಯ

ಗಣಪತಿಗೆ ಹೂವಿನ ಹಾರ ಅರ್ಪಿಸಿ, ನೀರು ಮತ್ತು ಜ್ಯೂಸ್ ವಿತರಣೆ

ರಾಗಿಗುಡ್ಡದಲ್ಲಿ ಭಕ್ತಿಭಾವದ ಸಂದಲ್ ಶರೀಫ್: ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ