ಮೋದಿಯವರ 25 ವರ್ಷಗಳ ಜನಸೇವೆಗೆ ಕೃತಜ್ಞತೆ!
ಮೋದಿಯವರ 25 ವರ್ಷಗಳ ಜನಸೇವೆಗೆ ಕೃತಜ್ಞತೆ!
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ 25 ವರ್ಷಗಳ ಸತತ ಜನಸೇವೆಯನ್ನು ಸ್ಮರಿಸಿ, ಒಂದು ತಿಂಗಳ ಕಾಲ ವಿವಿಧ ಸೇವಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಸೆಪ್ಟೆಂಬರ್ 17ರಂದು ಪ್ರಮುಖ ದೇವಾಲಯಗಳಲ್ಲಿ ವಿಶೇಷ ಪೂಜೆ ಹಾಗೂ ಮನೆಗಳ ಮುಂದೆ ‘ಆಶೀರ್ವಾದದ ದೀಪ’ ಬೆಳಗಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಸೆಪ್ಟೆಂಬರ್ 18ರಿಂದ 24ರವರೆಗೆ ಸ್ವಚ್ಛತಾ ಅಭಿಯಾನ, ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಸೈಕಲ್ ಜಾಥಾ ಹಾಗೂ ಬೀದಿ ನಾಟಕ ಸೇರಿದಂತೆ ವಿವಿಧ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕ್ಷೇತ್ರದ ವಿವಿಧ ಭಾಗಗಳಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಈ ಕಾರ್ಯಕ್ರಮಗಳನ್ನು ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸೆಪ್ಟೆಂಬರ್ 25ರಂದು ದೀನ್ದಯಾಳ್ ಉಪಾಧ್ಯಾಯ ಜಯಂತಿ, ಅಕ್ಟೋಬರ್ 2ರಂದು ಗಾಂಧಿ ಜಯಂತಿ ಅಂಗವಾಗಿ ಖಾದಿ–ಸ್ವದೇಶಿ ಸಂತೆ, ಶಾಲಾ ಮಕ್ಕಳಿಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಅಕ್ಟೋಬರ್ 17ರಂದು ಬೃಹತ್ ಮಾನವ ರಂಗೋಲಿ ಹಾಗೂ ಸೇವಾ ಜ್ಯೋತಿ ಬೆಳಗಿಸುವ ಮೂಲಕ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಸಮಾರೋಪ ನಡೆಯಲಿದೆ.
ಕ್ಷೇತ್ರದ ನಾಗರಿಕರು, ಯುವಜನತೆ ಹಾಗೂ ತಾಯಂದಿರು ವಿವಿಧ ಸೇವಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದ್ದಾರೆ. ಜನಸೇವೆಯ ಉದ್ದೇಶದಿಂದ ಆಯೋಜಿಸಿರುವ ಈ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವಂತೆ ಅವರು ಕರೆ ನೀಡಿದ್ದಾರೆ.
ವರದಿ ನದೀಮ್ ಕೆ ಎಂ


Comments
Post a Comment