ಶಿವಮೊಗ್ಗದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಶಿವಮೊಗ್ಗದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ




ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


ದಿನಾಂಕ 14/09/2026 ರಂದು ಶಿವಮೊಗ್ಗ ನಗರದ ಅಣ್ಣಾನಗರ ಎಡಭಾಗದ ಚಾನಲ್ ರಸ್ತೆಯಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು.


ಮಾಹಿತಿ ಆಧರಿಸಿ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ ಎನ್.ಕೆ. ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಚೂಡಾಮಣಿ ಎಎಸ್ಐ, ಸಂದೀಪ್, ಗಣೇಶ್, ಮನೋಹರ ಹಾಗೂ ಗುರುನಾಯ್ಕ್ ಅವರು ದಾಳಿ ನಡೆಸಿದ್ದಾರೆ.




ದಾಳಿಯ ವೇಳೆ ತೌಫೀಕ್ ಅಹಮದ್ (33), ಟಿಪ್ಪು ನಗರ ಎಡಭಾಗ, ಶಿವಮೊಗ್ಗ ಟೌನ್ ಹಾಗೂ ಸೈಯ್ಯದ್ ಅಪ್ಸರ್ (26), ಅಮೀರ್ ಜಾನ್ ಕಾಲೋನಿ, ಅನ್ವರ್ ಕಾಲೋನಿ, ಭದ್ರಾವತಿ, ಶಿವಮೊಗ್ಗ ಜಿಲ್ಲೆ ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಆರೋಪಿಗಳಿಂದ ಸುಮಾರು ₹70,000 ಮೌಲ್ಯದ 1 ಕೆಜಿ 420 ಗ್ರಾಂ ಗಾಂಜಾ, ಹೊಂಡಾ ಜಾಜ್ ಕಾರು ಹಾಗೂ ₹300 ನಗದು ಹಣವನ್ನು ಪೊಲೀಸರು ಅಮಾನತ್ತುಪಡಿಸಿಕೊಂಡಿದ್ದಾರೆ.


ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 320/2026, NDPS Act ಕಲಂ 8(c), 20(b)(II)B ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.


ವರದಿ ನದೀಮ್ ಕೆ ಎಂ



Comments

Popular posts from this blog

ರಾಗಿಗುಡ್ಡದ ನ್ಯಾಯಬೆಲೆ ಅಂಗಡಿ ಮುಂದೆ ಸರ್ಕಾರಿ ಅಕ್ಕಿ ಖರೀದಿ? ಅಧಿಕಾರಿಗಳ ಪರಿಶೀಲನೆ ಅಗತ್ಯ

ಗಣಪತಿಗೆ ಹೂವಿನ ಹಾರ ಅರ್ಪಿಸಿ, ನೀರು ಮತ್ತು ಜ್ಯೂಸ್ ವಿತರಣೆ

ರಾಗಿಗುಡ್ಡದಲ್ಲಿ ಭಕ್ತಿಭಾವದ ಸಂದಲ್ ಶರೀಫ್: ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ