ಶಾಂತಿನಗರದಲ್ಲಿ ಸಹೋದರತೆಗೆ ಸಾಕ್ಷಿಯಾದ ಸೌಹಾರ್ದಯುತ ಗಣೇಶೋತ್ಸವ

ಶಾಂತಿನಗರದಲ್ಲಿ ಸಹೋದರತೆಗೆ ಸಾಕ್ಷಿಯಾದ ಸೌಹಾರ್ದಯುತ ಗಣೇಶೋತ್ಸವ



ಶಿವಮೊಗ್ಗ: ಶಾಂತಿನಗರ ರಾಗಿಗುಡ್ಡದಲ್ಲಿ ಅದ್ದೂರಿಯಾಗಿ ಹಾಗೂ ಶಾಂತಿಯುತವಾಗಿ ಗಣೇಶ ಮೆರವಣಿಗೆ ಮತ್ತು ವಿಸರ್ಜನೆ ಕಾರ್ಯಕ್ರಮ ನಡೆಯಿತು. ಶಾಂತಿನಗರದ ಒಟ್ಟು 16 ಗಣಪತಿಗಳು ಏಕಕಾಲದಲ್ಲಿ ಮೆರವಣಿಗೆಯಲ್ಲಿ ಸಾಗಿದವು.


ಮೆರವಣಿಗೆ ಸಾಗುವ ಮಾರ್ಗದ ಉದ್ದಕ್ಕೂ ಸೌಹಾರ್ದತೆಯ ದೃಶ್ಯಗಳು ಕಂಡುಬಂದವು. ಮುಸ್ಲಿಂ ಬಾಂಧವರು ಹಿಂದೂ ಬಾಂಧವರಿಗೆ ಸಿಹಿ ಹಾಗೂ ತಂಪು ಪಾನೀಯಗಳನ್ನು ವಿತರಿಸಿ, ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ಈ ಮೂಲಕ ಶಾಂತಿನಗರದಲ್ಲಿ ಸಹೋದರತೆ ಮತ್ತು ಸೌಹಾರ್ದತೆಯ ಸಂದೇಶ ಸಾರಲಾಯಿತು.




ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ನಿಖಿಲ್ ಅವರ ಮಾರ್ಗದರ್ಶನದಲ್ಲಿ ಮೆರವಣಿಗೆ ಹಿನ್ನೆಲೆಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಡಿವೈಎಸ್‌ಪಿ ಸಂಜೀವಕುಮಾರ್ ಸ್ಥಳದಲ್ಲೇ ಮೊಕ್ಕಾಂ ಹೂಡಿ ಭದ್ರತಾ ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡಿದರು. ವೃತ್ತ ನಿರೀಕ್ಷಕ ರಾಘವೇಂದ್ರ ಖಂಡಿಕೆ ಅವರು ಶಾಂತಿಯುತ ಮೆರವಣಿಗೆಗಾಗಿ ಹಲವು ಸಭೆಗಳನ್ನು ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದರು.




ಶಾಂತಿನಗರದ ಮುಖಂಡರಾದ ನಾಗರಾಜ್ (ಗಾರೆ), ಶಹಾಬುದ್ದಿನ್ ಬಾಬು, ಬಸವರಾಜ್, ಸಯ್ಯದ್ ಸಾದಿಕ್, ಮಾರುತಿ, ಶಾಂತಿನಗರ ನಾಗರಿಕ ವೇದಿಕೆ ಅಧ್ಯಕ್ಷ ಸಯ್ಯದ್ ಮುಜಿಬುಲ್ಲ, ಜಯದೇವಪ್ಪ, ರಾಮಚಂದ್ರ ವಕೀಲರು, ನೂರುಲ್ಲಾ ಖಾನ್, ಕರವೇ ಸಾದಿಕ್, ವಿಕ್ರಂ ಸೇರಿದಂತೆ ಶಾಂತಿನಗರದ ವಿವಿಧ ಸಮಾಜಗಳ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಗಣೇಶೋತ್ಸವದಲ್ಲಿ ಭಾಗವಹಿಸಿದ್ದರು.


ಒಟ್ಟಾರೆ, ಶಾಂತಿನಗರ ರಾಗಿಗುಡ್ಡದಲ್ಲಿ ನಡೆದ ಗಣೇಶ ಮೆರವಣಿಗೆ ಶಾಂತಿ, ಸೌಹಾರ್ದತೆ ಹಾಗೂ ಸಹೋದರತೆಗೆ ಸಾಕ್ಷಿಯಾಯಿತು.

ವರದಿ ನದೀಮ್ ಕೆ ಎಂ 




Comments

Popular posts from this blog

ರಾಗಿಗುಡ್ಡದ ನ್ಯಾಯಬೆಲೆ ಅಂಗಡಿ ಮುಂದೆ ಸರ್ಕಾರಿ ಅಕ್ಕಿ ಖರೀದಿ? ಅಧಿಕಾರಿಗಳ ಪರಿಶೀಲನೆ ಅಗತ್ಯ

ಗಣಪತಿಗೆ ಹೂವಿನ ಹಾರ ಅರ್ಪಿಸಿ, ನೀರು ಮತ್ತು ಜ್ಯೂಸ್ ವಿತರಣೆ

ರಾಗಿಗುಡ್ಡದಲ್ಲಿ ಭಕ್ತಿಭಾವದ ಸಂದಲ್ ಶರೀಫ್: ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ