ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಕಲ ಸಿದ್ಧತೆ

 ಹಿಂದೂ ಮಹಾಗಣಪತಿ ವಿಸರ್ಜನಾ ಶೋಭಾಯಾತ್ರೆಗೆ ಸಕಲ ಸಿದ್ಧತೆ



ಶಿವಮೊಗ್ಗ: ನಗರದ ಹಿಂದೂ ಸಂಘಟನಾ ಮಹಾಮಂಡಳಿಯ ಶ್ರೀ ಮಹಾಗಣಪತಿ ವಿಸರ್ಜನಾ ಮಹೋತ್ಸವದ ಅಂಗವಾಗಿ ಶುಕ್ರವಾರ ನಡೆಯಲಿರುವ ಬೃಹತ್ ಶೋಭಾಯಾತ್ರೆಯನ್ನು ಸುರಕ್ಷಿತವಾಗಿ ಹಾಗೂ ಯಾವುದೇ ಗೊಂದಲಕ್ಕೆ ಅವಕಾಶವಾಗದಂತೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.


ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಹಿಂದೂ ಕೇಸರಿ ಅಲಂಕಾರ ಸಮಿತಿಯ ಮುಖಂಡರೊಂದಿಗೆ ಸಭೆ ನಡೆಸಿದರು.



ಸಭೆಯಲ್ಲಿ ಶೋಭಾಯಾತ್ರೆಯ ಮಾರ್ಗದಲ್ಲಿ ಸಾರ್ವಜನಿಕರ ಸುರಕ್ಷತೆ, ಸಿಸಿಟಿವಿ ಕಣ್ಗಾವಲು, ಸಂಚಾರ ಮಾರ್ಗ ಬದಲಾವಣೆ ಹಾಗೂ ಅಗತ್ಯ ಪೊಲೀಸ್ ಬಂದೋಬಸ್ತ್ ಸೇರಿದಂತೆ ವಿವಿಧ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಚರ್ಚಿಸಲಾಯಿತು.


ಶೋಭಾಯಾತ್ರೆ ಶಾಂತಿಯುತವಾಗಿ ಹಾಗೂ ವ್ಯವಸ್ಥಿತವಾಗಿ ನಡೆಯಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.


ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಶಿವಮೊಗ್ಗ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಹಾಗೂ ಹಿಂದೂ ಕೇಸರಿ ಅಲಂಕಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು


ವರದಿ ನದೀಮ್  ಕೆ ಎಂ 



Comments

Popular posts from this blog

ರಾಗಿಗುಡ್ಡದ ನ್ಯಾಯಬೆಲೆ ಅಂಗಡಿ ಮುಂದೆ ಸರ್ಕಾರಿ ಅಕ್ಕಿ ಖರೀದಿ? ಅಧಿಕಾರಿಗಳ ಪರಿಶೀಲನೆ ಅಗತ್ಯ

ಗಣಪತಿಗೆ ಹೂವಿನ ಹಾರ ಅರ್ಪಿಸಿ, ನೀರು ಮತ್ತು ಜ್ಯೂಸ್ ವಿತರಣೆ

ರಾಗಿಗುಡ್ಡದಲ್ಲಿ ಭಕ್ತಿಭಾವದ ಸಂದಲ್ ಶರೀಫ್: ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ