ರೈಲ್ವೆ ಮೇಲುಸೇತುವೆ ಮೇಲೆ ಸರಣಿ ಅಪಘಾತ

 ರೈಲ್ವೆ ಮೇಲುಸೇತುವೆ ಮೇಲೆ ಸರಣಿ ಅಪಘಾತ



ಆಟೋ ಚಾಲಕ ಸೇತುವೆ ಪಕ್ಕದಲ್ಲಿ ಸಿಲುಕಿ, ಬೈಕ್ ಸವಾರನ ಕಾಲಿಗೆ ಗಂಭೀರ ಗಾಯ


ಶಿವಮೊಗ್ಗ: ನಗರದ ರೈಲ್ವೆ ನಿಲ್ದಾಣದ ಬಳಿಯ ರೈಲ್ವೆ ಮೇಲುಸೇತುವೆ ಮೇಲೆ ಸರಣಿ ಅಪಘಾತ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.


ಸಿಫ್ಟ್ ಕಾರು, ಆಟೋ ಹಾಗೂ ರಾಯಲ್ ಎನ್‌ಫೀಲ್ಡ್ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೂರು ವಾಹನಗಳು ಜಖಂಗೊಂಡಿವೆ.



ಅಪಘಾತದ ರಭಸಕ್ಕೆ ಆಟೋ ಚಾಲಕ ಭಾಸ್ಕರ್ ಸೇತುವೆಯ ಪಕ್ಕಕ್ಕೆ ಹೋಗಿ ಸಿಲುಕಿಕೊಂಡಿದ್ದರು. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಸ್ಥಳೀಯರು ಅವರನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.


ಇನ್ನು ಅಪಘಾತದಲ್ಲಿ ರಾಯಲ್ ಎನ್‌ಫೀಲ್ಡ್ ಬೈಕ್ ಚಾಲಕ ನಾಯೀಮ್ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸಹ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.



ಸರಣಿ ಅಪಘಾತದ ಪರಿಣಾಮ ರೈಲ್ವೆ ಮೇಲುಸೇತುವೆ ಮೇಲೆ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಗಿ ಟ್ರಾಫಿಕ್ ಜಾಮ್ ಉಂಟಾಯಿತು.


ಘಟನೆಯ ಮಾಹಿತಿ ತಿಳಿದು 112 ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದರು. ಬಳಿಕ ಸಂಚಾರ ಸುಗಮಗೊಳಿಸುವ ಕಾರ್ಯ ಕೈಗೊಳ್ಳಲಾಯಿತು.




ಈ ಘಟನೆ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.


ವರದಿ ನದೀಮ್ ಕೆ ಎಂ



Comments

Popular posts from this blog

ರಾಗಿಗುಡ್ಡದ ನ್ಯಾಯಬೆಲೆ ಅಂಗಡಿ ಮುಂದೆ ಸರ್ಕಾರಿ ಅಕ್ಕಿ ಖರೀದಿ? ಅಧಿಕಾರಿಗಳ ಪರಿಶೀಲನೆ ಅಗತ್ಯ

ಗಣಪತಿಗೆ ಹೂವಿನ ಹಾರ ಅರ್ಪಿಸಿ, ನೀರು ಮತ್ತು ಜ್ಯೂಸ್ ವಿತರಣೆ

ರಾಗಿಗುಡ್ಡದಲ್ಲಿ ಭಕ್ತಿಭಾವದ ಸಂದಲ್ ಶರೀಫ್: ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ