ಶಿವಮೊಗ್ಗದಲ್ಲಿ ಭರ್ಜರಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು..! 1.02 ಕೋಟಿ ಮೌಲ್ಯದ ಚಿನ್ನ, ನಗದು ಸೇರಿ ವಸ್ತುಗಳು ವಶಕ್ಕೆ..
ಶಿವಮೊಗ್ಗದಲ್ಲಿ ಭರ್ಜರಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು..
1.02 ಕೋಟಿ ಮೌಲ್ಯದ ಚಿನ್ನ, ನಗದು ಸೇರಿ ವಸ್ತುಗಳು ವಶಕ್ಕೆ..!
ಶಿವಮೊಗ್ಗ: ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದ ವಾಸದ ಮನೆಯಲ್ಲಿ ಯಾರೋ ಕಳ್ಳ ಮನೆಯ ಬಾಗಿಲಿನ ಬೀಗವನ್ನು ಮುರಿದು, ಮನೆಯ ಒಳಗಿದ್ದ ಸುಮಾರು 943 ಗ್ರಾಂ ತೂಕದ ಬಂಗಾರದ ಒಡವೆಗಳು, 500 ಗ್ರಾಂ ಬೆಳ್ಳಿ ವಸ್ತುಗಳು, 86,000 ನಗದು ಹಣ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದ ಬಗ್ಗೆ ದೂರು ನೀಡಲಾಗಿತ್ತು.
ಈ ದೂರಿನ ಮೇರೆಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.175/2026 ಕಲಂ 331(3), 305 ಬಿಎನ್ಎಸ್ ರೀತ್ಯಾ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಆರೋಪಿಯನ್ನು ಹಾಗೂ ಕಳುವಾಗಿದ್ದ ಮಾಲನ್ನು ಪತ್ತೆ ಮಾಡುವ ಬಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ. ಐಪಿಎಸ್ ರವರ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಕಾರಿಯಪ್ಪ ಹಾಗೂ ಶಿವಮೊಗ್ಗ ಉಪವಿಭಾಗದ ಡಿವೈಎಸ್ಪಿ ಶ್ರೀ ಶೀಲವಂತ ಹೊಸಮನಿ ರವರ ಮಾರ್ಗದರ್ಶನದಲ್ಲಿ ಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಶ್ರೀ ಹರೀಶ್ ಕೆ. ಪಟೇಲ್ ಹಾಗೂ ಸಿಬ್ಬಂದಿಯವರನ್ನು ಒಳಗೊಂಡ ತಂಡವನ್ನು ರಚಿಸಲಾಗಿತ್ತು.
ಸದರಿ ತನಿಖಾ ತಂಡವು ದಿ.01/10/2025 ರಂದು ಆರೋಪಿತನಾದ ಮೊಹಮ್ಮದ್ ರಫೀಕ್ @ ಕರಿಯ, ಹಗರಿಬೊಮ್ಮನಹಳ್ಳಿ ವಾಸಿ ಈತನನ್ನು ದಸ್ತಗಿರಿ ಮಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನಿಂದ 80,92,435/- ರೂಗಳ ಮೌಲ್ಯದ 558.099 ಗ್ರಾಂ ಬಂಗಾರದ ಒಡವೆಗಳು, 20 ಲಕ್ಷ ರೂಪಾಯಿ ನಗದು ಹಣ ಹಾಗೂ 1,85,000/- ರೂಪಾಯಿ ಮೌಲ್ಯದ ಬೆಲೆಬಾಳುವ ವಸ್ತುಗಳನ್ನು ಸೇರಿ ಒಟ್ಟಾರೆ 1,02,77,435/- ರೂಪಾಯಿ ಮೌಲ್ಯದ ವಸ್ತುಗಳನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.
ಈ ಪ್ರಕರಣವನ್ನು ಪತ್ತೆ ಮಾಡಿದ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೂ ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ
ವರದಿ ನದೀಮ್ ಕೆ ಎಂ



Comments
Post a Comment