ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷ! ಸಿ.ಜಿ. ಮಧುಸುದನ್ ನೇಮಕ”

 ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷರ ನೇಮಕ



ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (SUDA)ದ ಅಧ್ಯಕ್ಷರಾಗಿ ಸಿ.ಜಿ. ಮಧುಸುದನ್ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.


ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 3(3) ಮತ್ತು 3(4)ರ ಅಡಿಯಲ್ಲಿ ಸರ್ಕಾರಕ್ಕೆ ಇರುವ ಅಧಿಕಾರವನ್ನು ಚಲಾಯಿಸಿ ಈ ನೇಮಕಾತಿ ಮಾಡಲಾಗಿದೆ.


2026ರ ಅಕ್ಟೋಬರ್ 1ರಂದು ಹೊರಡಿಸಿರುವ ಅಧಿಸೂಚನೆಯಂತೆ, ಶಿವಮೊಗ್ಗದ ಕುವೆಂಪು ನಗರದ ನಿವಾಸಿ ಸಿ.ಜಿ. ಮಧುಸುದನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.



ಈ ಕುರಿತು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ.


ನೇಮಕಾತಿ ಆದೇಶ ಹೊರಬಿದ್ದ ಹಿನ್ನೆಲೆಯಲ್ಲಿ, ರಾಗಿಗುಡ್ಡದ ಯುವಮುಖಂಡ ಮೋಸಿನ್ ಖಾನ್ ಅವರು ಸೂಡ ಕಚೇರಿಗೆ ಭೇಟಿ ನೀಡಿ ನೂತನ ಅಧ್ಯಕ್ಷರಾದ ಸಿ.ಜಿ. ಮಧುಸುದನ್ ಅವರನ್ನು ಅಭಿನಂದಿಸಿದರು.


ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸಿ.ಜಿ. ಮಧುಸುದನ್ ಅವರು ಅಧಿಕಾರ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.


ವರದಿ ನದೀಮ್ ಕೆ ಎಂ






Comments

Popular posts from this blog

ರಾಗಿಗುಡ್ಡದ ನ್ಯಾಯಬೆಲೆ ಅಂಗಡಿ ಮುಂದೆ ಸರ್ಕಾರಿ ಅಕ್ಕಿ ಖರೀದಿ? ಅಧಿಕಾರಿಗಳ ಪರಿಶೀಲನೆ ಅಗತ್ಯ

ಗಣಪತಿಗೆ ಹೂವಿನ ಹಾರ ಅರ್ಪಿಸಿ, ನೀರು ಮತ್ತು ಜ್ಯೂಸ್ ವಿತರಣೆ

ರಾಗಿಗುಡ್ಡದಲ್ಲಿ ಭಕ್ತಿಭಾವದ ಸಂದಲ್ ಶರೀಫ್: ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ