ಅತಿವೇಗದ ವಾಹನಕ್ಕೆ ಎರಡು ಗೋವುಗಳು ಬಲಿ! ವಾಹನ ಪತ್ತೆಗೆ ಪೊಲೀಸರ ಕ್ರಮ
ರಿಪ್ಪನ್ಪೇಟೆಯಲ್ಲಿ ಭೀಕರ ಅಪಘಾತ: ಎರಡು ಗೋವುಗಳು ಸ್ಥಳದಲ್ಲೇ ಸಾವು!
ರಿಪ್ಪನ್ಪೇಟೆ: ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಎರಡು ಗೋವುಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೆರಡು ಗೋವುಗಳು ಗಾಯಗೊಂಡಿರುವ ಘಟನೆ ರಿಪ್ಪನ್ಪೇಟೆ ಪೊಲೀಸ್ ಠಾಣೆ ಎದುರು ಗುರುವಾರ ನಡೆದಿದೆ.
ಗುರುವಾರ ಬೆಳಗಿನ ಜಾವ ಸುಮಾರು 4.30ರ ವೇಳೆಯಲ್ಲಿ ಅತಿವೇಗವಾಗಿ ಸಂಚರಿಸುತ್ತಿದ್ದ ವಾಹನವು ಗೋವುಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಗೋವುಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೆರಡು ಗೋವುಗಳು ಗಾಯಗೊಂಡಿವೆ.
ಅಪಘಾತಕ್ಕೆ ಕಾರಣವಾದ ವಾಹನ ಕ್ಯಾಂಟರ್ ಆಗಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಕುರಿತು ಈವರೆಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಘಟನೆ ಗಮನಕ್ಕೆ ಬರುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಗಾಯಗೊಂಡಿದ್ದ ಎರಡು ಗೋವುಗಳಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ, ಅವುಗಳನ್ನು ಸಂತೈಸುವ ಕಾರ್ಯ ನಡೆಸಿದ್ದಾರೆ. ಬಳಿಕ ಮೃತಪಟ್ಟ ಎರಡು ಗೋವುಗಳ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.
ಇನ್ನು ಘಟನೆ ಸಂಬಂಧ ರಿಪ್ಪನ್ಪೇಟೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ವರದಿ ನದೀಮ್ ಕೆ ಎಂ



Comments
Post a Comment