ಶಾಂತಿನಗರದಲ್ಲಿ ಪಾರ್ಕ್ ನಿರ್ಮಾಣಕ್ಕೆ ಮನವಿ..! ನೂತನ ಸೂಡಾ ಅಧ್ಯಕ್ಷರಿಗೆ ನಾಗರಿಕ ಹಕ್ಕುಗಳ ವೇದಿಕೆ ಮನವಿ..!!

 ಶಾಂತಿನಗರದಲ್ಲಿ ಪಾರ್ಕ್ ನಿರ್ಮಾಣಕ್ಕೆ ನೂತನ ಸೂಡಾ ಅಧ್ಯಕ್ಷರಿಗೆ ಮನವಿ



ಶಿವಮೊಗ್ಗ: ಶಾಂತಿನಗರ ನಾಗರಿಕ ಹಕ್ಕುಗಳ ವೇದಿಕೆ ವತಿಯಿಂದ ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾದ ಶ್ರೀ ಮಧುಸೂಧನ್ ಸಿ.ಜಿ. ಅವರನ್ನು ಭೇಟಿಯಾಗಿ ಶುಭಕೋರಲಾಯಿತು.


ಇದೇ ಸಂದರ್ಭದಲ್ಲಿ ಶಾಂತಿನಗರದ ಜನತೆಯ ಅನುಕೂಲಕ್ಕಾಗಿ ಪಾರ್ಕ್ ನಿರ್ಮಾಣ ಮಾಡಿಕೊಡುವಂತೆ ವೇದಿಕೆಯ ಅಧ್ಯಕ್ಷರಾದ ಸಯ್ಯದ್ ಮುಜಿಬುಲ್ಲ ಅವರ ನೇತೃತ್ವದಲ್ಲಿ ನೂತನ ಸೂಡಾ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.


ಶಾಂತಿನಗರದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಾರ್ಕ್ ನಿರ್ಮಾಣವಾದರೆ, ಸ್ಥಳೀಯ ನಿವಾಸಿಗಳಿಗೆ ವಾಯುವಿಹಾರ ಹಾಗೂ ಆರೋಗ್ಯಕರ ವಾತಾವರಣ ಕಲ್ಪಿಸುವುದರ ಜೊತೆಗೆ ಮಕ್ಕಳು ಮತ್ತು ಹಿರಿಯರಿಗೆ ಉತ್ತಮ ಸಾರ್ವಜನಿಕ ಸ್ಥಳ ದೊರೆಯಲಿದೆ ಎಂದು ವೇದಿಕೆ ಸದಸ್ಯರು ಮನವಿಯಲ್ಲಿ ತಿಳಿಸಿದ್ದಾರೆ.


ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್, ಕಾರ್ಮಿಕ ಮುಖಂಡರಾದ ಅಪ್ಸರ್ ಭಾಷಾ, ಶಾಂತಿನಗರದ ಮುಖಂಡರಾದ ಪ್ರಸನ್ನ ಕುಮಾರ್, ನೂರುಲ್ಲಾ ಖಾನ್, ಕರವೇ ಸಾದಿಕ್, ಸುಭಾನ್, ಸಯ್ಯದ್ ಶಫಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ವರದಿ.ನದೀಮ್ ಕೆ ಎಂ



Comments

Popular posts from this blog

ರಾಗಿಗುಡ್ಡದ ನ್ಯಾಯಬೆಲೆ ಅಂಗಡಿ ಮುಂದೆ ಸರ್ಕಾರಿ ಅಕ್ಕಿ ಖರೀದಿ? ಅಧಿಕಾರಿಗಳ ಪರಿಶೀಲನೆ ಅಗತ್ಯ

ಗಣಪತಿಗೆ ಹೂವಿನ ಹಾರ ಅರ್ಪಿಸಿ, ನೀರು ಮತ್ತು ಜ್ಯೂಸ್ ವಿತರಣೆ

ರಾಗಿಗುಡ್ಡದಲ್ಲಿ ಭಕ್ತಿಭಾವದ ಸಂದಲ್ ಶರೀಫ್: ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ