ನಡು ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್..! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..! ಥಂಬ್ನೇಲ್:

 ನಡು ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್..! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!



ಶಿವಮೊಗ್ಗ: ಶಿವಮೊಗ್ಗ–ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ ‘ಡ್ರೀಮ್ ಬಸ್’ ಟೂರ್ಸ್ ಅಂಡ್ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಗುರುವಾರ ಬೆಳಗಿನ ಜಾವ ಆನಂದಪುರದ ಮುಂಬಾಳು ಸಮೀಪ ನಡೆದಿದೆ.


ಬೆಳಿಗ್ಗೆ ಸುಮಾರು 5.45ರ ವೇಳೆಗೆ ಬಸ್‌ನ ಬ್ಯಾಟರಿ ಬಳಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಚಾಲಕನ ಸೀಟಿನ ಸಮೀಪ ಹೊಗೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣ ಎಚ್ಚೆತ್ತ ಚಾಲಕ ಫೈರ್ ಎಕ್ಸ್‌ಟಿಂಗ್ವಿಷರ್ ಬಳಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಬೆಂಕಿ ಕ್ಷಣಾರ್ಧದಲ್ಲೇ ಬಸ್‌ನ ಇತರೆ ಭಾಗಗಳಿಗೂ ವ್ಯಾಪಿಸಿದೆ.



ಬಸ್ ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದು, ಶಿವಮೊಗ್ಗ ಹಾಗೂ ಕುಂಸಿ ಭಾಗಗಳಲ್ಲಿ ಬಹುತೇಕ ಪ್ರಯಾಣಿಕರು ಇಳಿದಿದ್ದರು. ಸಾಗರದತ್ತ ಪ್ರಯಾಣಿಸುತ್ತಿದ್ದ ಕೆಲವೇ ಪ್ರಯಾಣಿಕರು ಬಸ್‌ನಲ್ಲಿದ್ದರು. ಚಾಲಕ ಸಮಯಪ್ರಜ್ಞೆ ಮೆರೆದು ಪ್ರಯಾಣಿಕರು ಹಾಗೂ ಅವರ ಲಗೇಜ್‌ಗಳನ್ನು ಸುರಕ್ಷಿತವಾಗಿ ಕೆಳಗಿಳಿಸಿ, ಮತ್ತೊಂದು ಬಸ್‌ನಲ್ಲಿ ಸಾಗರಕ್ಕೆ ಕಳುಹಿಸಿಕೊಟ್ಟಿದ್ದಾರೆ.



ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಬೆಂಕಿಯ ತೀವ್ರತೆಗೆ ಖಾಸಗಿ ಬಸ್ ಸಂಪೂರ್ಣವಾಗಿ ಸುಟ್ಟುಹೋಗಿದೆ.


ಬಸ್‌ನ್ನು ಆನಂದಪುರ ಮೂಲದ ಸಯ್ಯದ್ ಅಕ್ರಂ ಎಂಬುವವರು ಮಾಲೀಕರಾಗಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಕುರಿತು ಆನಂದಪುರ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಪ್ರವೀಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ವರದಿ ನದೀಮ್ ಕೆ ಎಂ





Comments

Popular posts from this blog

ರಾಗಿಗುಡ್ಡದ ನ್ಯಾಯಬೆಲೆ ಅಂಗಡಿ ಮುಂದೆ ಸರ್ಕಾರಿ ಅಕ್ಕಿ ಖರೀದಿ? ಅಧಿಕಾರಿಗಳ ಪರಿಶೀಲನೆ ಅಗತ್ಯ

ಗಣಪತಿಗೆ ಹೂವಿನ ಹಾರ ಅರ್ಪಿಸಿ, ನೀರು ಮತ್ತು ಜ್ಯೂಸ್ ವಿತರಣೆ

ರಾಗಿಗುಡ್ಡದಲ್ಲಿ ಭಕ್ತಿಭಾವದ ಸಂದಲ್ ಶರೀಫ್: ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ