ಅಣ್ಣಾನಗರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ಓರ್ವ ಆರೋಪಿ ಬಂಧನ – ಆಯುಧ, ಬೈಕ್ ವಶಕ್ಕೆ..!
ಅಣ್ಣಾನಗರ ಕೊಲೆ ಪ್ರಕರಣ: ಓರ್ವ ಆರೋಪಿ ಬಂಧನ
ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಣ್ಣಾನಗರ ಚಾನೆಲ್ ಏರಿ ರಸ್ತೆಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
2026ರ ಅಕ್ಟೋಬರ್ 3ರಂದು ರಾತ್ರಿ ಅಣ್ಣಾನಗರ ಚಾನೆಲ್ ಏರಿ ರಸ್ತೆಯಲ್ಲಿ ಮೊಹಮದ್ ಅಲಿ ಬಿನ್ ಲೇಟ್ ಅಬ್ದುಲ್ ರೆಹಮಾನ್ (37) ಎಂಬುವವರ ಮೇಲೆ ದುಷ್ಕರ್ಮಿಗಳು ತೀವ್ರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿ, ಮೃತದೇಹವನ್ನು ರಸ್ತೆಯ ಬದಿಯಲ್ಲಿ ಹಾಕಿ ತೆರಳಿದ್ದರು.
ಈ ಕುರಿತು ಮೃತನ ಸಹೋದರ ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 322/2026, ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 103(1) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ತನಿಖೆ ಮುಂದುವರಿಸಿದ ಪೊಲೀಸರು ಅಕ್ಟೋಬರ್ 5ರಂದು ಸೈಯ್ಯದ್ ಜಿಲಾನ್ ಅಲಿಯಾಸ್ 360 (23) ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಶಿವಮೊಗ್ಗದ ಅಶೋಕನಗರ 3ನೇ ಕ್ರಾಸ್ ನಿವಾಸಿಯಾಗಿದ್ದು, ಟೈಲ್ಸ್ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಲಾಗಿದೆ ಎಂದು ಹೇಳಲಾದ ಆಯುಧ ಹಾಗೂ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ವರದಿ ನದೀಮ್ ಕೆ ಎಂ


Comments
Post a Comment