ರಾಗಿಗುಡ್ಡದಲ್ಲಿ ಸರ್ಕಾರಿ ಅಕ್ಕಿ ಖರೀದಿ ಆರೋಪ: ಅಧಿಕಾರಿಗಳು ಪರಿಶೀಲನೆ ನಡೆಸುವಂತೆ ಸ್ಥಳೀಯರ ಆಗ್ರಹ ಶಿವಮೊಗ್ಗ : ನಗರದ ರಾಗಿಗುಡ್ಡದ ನಗರತ್ನಂ ಬಡಾವಣೆಯಲ್ಲಿರುವ ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲಿ ಸರ್ಕಾರಿ ಪಡಿತರ ಅಕ್ಕಿಯನ್ನು ಕೆಲವರು ಖರೀದಿಸುತ್ತಿರುವ ದೃಶ್ಯ ಕಂಡುಬಂದಿದೆ. ಒಂದು–ಎರಡು ಆಟೋ ಹಾಗೂ ಬೈಕ್ಗಳಲ್ಲಿ ಬಂದ ಕೆಲವರು ನ್ಯಾಯಬೆಲೆ ಅಂಗಡಿಯ ಬಳಿ ಅಕ್ಕಿಯನ್ನು ಖರೀದಿಸುತ್ತಿರುವ ದೃಶ್ಯ ಸ್ಥಳೀಯರ ಗಮನಕ್ಕೆ ಬಂದಿದೆ. ಸರ್ಕಾರದಿಂದ ಅರ್ಹ ಫಲಾನುಭವಿಗಳಿಗೆ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಖರೀದಿಸಿ, ನಂತರ ಬೇರೆಡೆ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದೆ. ನ್ಯಾಯಬೆಲೆ ಅಂಗಡಿಯ ಮುಂಭಾಗದಲ್ಲೇ ಈ ರೀತಿಯಾಗಿ ಅಕ್ಕಿ ಖರೀದಿ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಈ ಕುರಿತು ಸಂಬಂಧಪಟ್ಟ ಆಹಾರ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕಾಗಿದೆ ಎಂಬುದು ಸ್ಥಳೀಯರ ಒತ್ತಾಯವಾಗಿದೆ. ಅಕ್ಕಿಯನ್ನು ಯಾರು ಖರೀದಿಸುತ್ತಿದ್ದಾರೆ ? ಯಾವ ಉದ್ದೇಶಕ್ಕಾಗಿ ಖರೀದಿಸಲಾಗುತ್ತಿದೆ? ಖರೀದಿಸಿದ ಅಕ್ಕಿ ಎಲ್ಲಿಗೆ ಸಾಗಿಸಲಾಗುತ್ತಿದೆ? ಎಂಬುದರ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕಾಗಿದೆ. ಅದೇ ರೀತಿ, ನ್ಯಾಯಬೆಲೆ ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಗಮನಕ್ಕೆ ಈ ವಿಚಾರ ಬಂದಿದೆಯೇ? ಬಂದಿದ್ದರೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆಯೇ? ಎಂಬುದನ್ನೂ ಪರಿಶೀಲಿಸಬೇಕಿದೆ. ಬಡ ಮತ್ತು ಅರ್ಹ ಫಲಾನುಭವಿಗಳಿಗೆ ...
ಗಣೇಶ ವಿಸರ್ಜನೆ ವೇಳೆ ಸೌಹಾರ್ದದ ಸಂದೇಶ ಗಣಪತಿಗೆ ಹೂವಿನ ಹಾರ ಅರ್ಪಿಸಿ, ನೀರು ಮತ್ತು ಜ್ಯೂಸ್ ವಿತರಣೆ ಶಿವಮೊಗ್ಗ : ಗಣೇಶ ವಿಸರ್ಜನೆ ಕಾರ್ಯಕ್ರಮದ ವೇಳೆ ಸುಳೆ ಬೈಲ್ ಮಕ್ಕಾ ಮಸೀದಿ ನ್ಯಾಯಬೆ ಸದರ್ ಅಸ್ಲಂ, ಯಾಸೀನ್, ಜೋಹರ್, ಅಜೀಜ್ ಮತ್ತು ಸಾಬಿರ್ ಅವರು ಸೌಹಾರ್ದತೆಯ ಸಂದೇಶ ಸಾರಿದರು. ಗಣೇಶ ವಿಸರ್ಜನೆಗೆ ತೆರಳುತ್ತಿದ್ದ ಭಕ್ತರಿಗೆ ಆತ್ಮೀಯವಾಗಿ ಸ್ವಾಗತಿಸಿ, ಗಣಪತಿಗೆ ಹೂವಿನ ಹಾರ ಅರ್ಪಿಸಿದರು. ಇದೇ ಸಂದರ್ಭದಲ್ಲಿ ವಿಸರ್ಜನೆ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರಿಗೆ ಕುಡಿಯುವ ನೀರು ಮತ್ತು ಜ್ಯೂಸ್ ವಿತರಣೆ ಮಾಡಿದರು. ಎಲ್ಲಾ ಧರ್ಮಗಳ ನಡುವೆ ಪರಸ್ಪರ ಗೌರವ, ಸಹಬಾಳ್ವೆ ಮತ್ತು ಸೌಹಾರ್ದತೆ ಮೂಡಿಸುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳು ಮಹತ್ವ ಪಡೆದುಕೊಳ್ಳುತ್ತವೆ. ಗಣೇಶ ವಿಸರ್ಜನೆ ವೇಳೆ ಸಹೋದರತ್ವದ ಸಂದೇಶ ಸಾರಿದ ಈ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ ವರದಿ ನದೀಮ್ ಕೆ ಎಂ
ಶಿವಮೊಗ್ಗ ರಾಗಿಗುಡ್ಡದಲ್ಲಿ ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿಅವರ ದರ್ಗಾದಲ್ಲಿ ಭಕ್ತಿಭಾವದಿಂದ ನಡೆದ ಸಂದಲ್ ಶರೀಫ್ ಕಾರ್ಯಕ್ರಮ ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿ ನೆಲೆಗೊಂಡಿರುವ ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜಗದ್ಗುರು (ರಹ್ಮತುಲ್ಲಾಹಿ ಅಲೈಹಿ) ಸಾಹೇಬ್, ಪೀರ್ ಖಲೀಫಾ-ಎ-ಅವ್ವಲ್ ಹಜ್ರತ್ ಪೀರ್ ಮೊಹಮ್ಮದ್ ಖಾಲಿಕ್ ಅಲಿ ಶಾಹ್ ಚಿಷ್ಟಿ ಉಲ್ ಕಾದ್ರಿ (ರಹ್ಮತುಲ್ಲಾಹಿ ಅಲೈಹಿ ಅವರ ದರ್ಗಾದಲ್ಲಿ ಇಂದು ಭಕ್ತಿಭಾವದಿಂದ ಸಂದಲ್ ಶರೀಫ್ ಕಾರ್ಯಕ್ರಮ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಆಗಮಿಸಿದ್ದ ಭಕ್ತರು, ಮುರೀದರು ಮತ್ತು ಖಲೀಫಾಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು. ಕಾರ್ಯಕ್ರಮದ ಅಂಗವಾಗಿ ಬರ್ಗಾಹ್-ಎ-ಹಜ್ರತ್ ಖ್ವಾಜಾ ಸಯ್ಯದ್ ಶಾಹ್ ಅಬ್ದುಲ್ ಖಾದರ್ ಮೊಹಮ್ಮದ್ ಮೊಹಮ್ಮದ್ ಉಲ್ ಅಲ್ ಹಾಶ್ಮಿ ವಲ್ ಹುಸೈನಿ ಲಿಂಗ್ ಬಂಧ್ ಜ...
Comments
Post a Comment