Posts

ಸೂಡಾ ಅಧ್ಯಕ್ಷ ಮಧುಸೂದನ್‌ಗೆ ಸಚಿವರ ಅಭಿನಂದನೆ!

Image
  ಸೂಡಾ ಅಧ್ಯಕ್ಷ ಮಧುಸೂದನ್‌ಗೆ ಸಚಿವ ಮಧು ಬಂಗಾರಪ್ಪ ಅಭಿನಂದ ನೆ ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಂಘಟನೆ ಬಲಪಡಿಸಲು ಯುವ ನಾಯಕರಿಗೆ ಕರೆ ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಸಿ.ಜಿ. ಮಧುಸೂದನ್ ಅವರಿಗೆ ಸಚಿವ ಮಧು ಬಂಗಾರಪ್ಪ ಅಭಿನಂದನೆ ಸಲ್ಲಿಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಯುವ ನಾಯಕರು ಸಂಘಟಿತರಾಗಿ ಕೆಲಸ ಮಾಡುವಂತೆ ಕರೆ ನೀಡಿದ್ದಾರೆ. ಬೆಂಗಳೂರಿನ ತಮ್ಮ ಗೃಹ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿದ ಸೂಡಾ ನೂತನ ಅಧ್ಯಕ್ಷ ಸಿ.ಜಿ. ಮಧುಸೂದನ್ , ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರು ಮಧುಸೂದನ್ ಅವರಿಗೆ ಶುಭ ಹಾರೈಸಿ, ಅವರ ನಾಯಕತ್ವದಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ಅವಳಿ ನಗರಗಳು ಮೂಲಸೌಕರ್ಯ, ನಗರ ಯೋಜನೆ ಹಾಗೂ ಸಮಗ್ರ ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೇರಲಿ ಎಂದು ಆಶಿಸಿದರು. ಇದೇ ವೇಳೆ, ಮಧುಸೂದನ್ ಅವರು ಸಚಿವರನ್ನು ಸನ್ಮಾನಿಸಲು ಮುಂದಾದಾಗ, ಯುವ ನಾಯಕರು ರಾಜಕೀಯದಲ್ಲಿ ಇನ್ನಷ್ಟು ಬೆಳೆಯಬೇಕು ಎಂದು ಮಧು ಬಂಗಾರಪ್ಪ ಹೇಳಿದರು. “ಈ ಸನ್ಮಾನ ನನಗಲ್ಲ, ನಿಮಗೆ ಸಲ್ಲಬೇಕು” ಎಂದು ಹೇಳುವ ಮೂಲಕ ಯುವ ನಾಯಕತ್ವಕ್ಕೆ ಪ್ರೋತ್ಸಾಹ ನೀಡಿದರು. 2002ರಲ್ಲಿ ಎನ್‌ಎಸ್‌ಯುಐ ಸಂಘಟನೆಯ ಮೂಲಕ ರಾಜಕೀಯ ಪ್ರವೇಶಿಸಿದ ಸಿ.ಜಿ. ಮಧುಸೂದನ್, 2010ರಲ್ಲಿ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ...

ಜೀವಂತ ಮತದಾರರನ್ನು ಮೃತರೆಂದು ತೋರಿಸಿದ ಆರೋಪ..! ಯತ್ನಾಳ್ ಸೇರಿ ಮೂವರ ವಿರುದ್ಧ FIR..!!

Image
  ವಿಜಯಪುರ: ಜೀವಂತ ಮತದಾರರನ್ನು ಮೃತರೆಂದು ತೋರಿಸಿ ಹೆಸರು ತೆಗೆಸಲು ಅರ್ಜಿ – ಯತ್ನಾಳ್ ವಿರುದ್ಧ ಎಫ್‌ಐಆರ್..!! ವಿಜಯಪುರ : ಜೀವಂತವಾಗಿರುವ ಎಂಟು ಮತದಾರರನ್ನು ಮೃತಪಟ್ಟಿದ್ದಾರೆ ಎಂದು ತೋರಿಸಿ, ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಅರ್ಜಿ ಸಲ್ಲಿಸಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವಿಜಯಪುರ ನಗರದ ಬಾಗವಾನ್ ಕಾಲೋನಿ ನಿವಾಸಿ ಅಬ್ದುಲ್ ರಝಾಕ್ ಮೌಲಾಸಾಬ್ ನೀಡಿದ ದೂರಿನ ಆಧಾರದ ಮೇಲೆ ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾವು ಸೇರಿದಂತೆ ಎಂಟು ಮಂದಿ ಜೀವಂತವಾಗಿದ್ದರೂ, ಅವರನ್ನು ಮೃತರೆಂದು ಬಿಂಬಿಸಿ ನಕಲಿ ಮರಣ ಪ್ರಮಾಣ ಪತ್ರಗಳನ್ನು ಸಿದ್ಧಪಡಿಸಲಾಗಿದೆ ಎಂದು ಅಬ್ದುಲ್ ಆರೋಪಿಸಿದ್ದಾರೆ . ಕಳೆದ ಸೆಪ್ಟೆಂಬರ್ 3ರಂದು ಈ ಮರಣ ಪ್ರಮಾಣ ಪತ್ರಗಳನ್ನು ವಿಜಯಪುರ ನಗರ ಪಾಲಿಕೆ ಆಯುಕ್ತರಿಗೆ ಸಲ್ಲಿಸಿ, ಸಂಬಂಧಿಸಿದವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಮನವಿ ಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಅಲ್ಲದೇ, ಶಾಸಕರ ಲೆಟರ್‌ಹೆಡ್‌ನಲ್ಲೇ ಈ ಮನವಿ ಸಲ್ಲಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನ ಆಧಾರದ ಮೇಲೆ ಜಲನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಎಫ್‌ಐಆರ್‌ನಲ್ಲಿ ಯತ್ನಾಳ್ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇತರ ಇಬ್ಬರ ಹ...

ನಡು ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್..! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..! ಥಂಬ್ನೇಲ್:

Image
  ನಡು ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಖಾಸಗಿ ಬಸ್..! ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..! ಶಿವಮೊಗ್ಗ: ಶಿವಮೊಗ್ಗ–ಸಾಗರ ಮಾರ್ಗದಲ್ಲಿ ಸಂಚರಿಸುತ್ತಿದ್ದ ‘ ಡ್ರೀಮ್ ಬಸ್’ ಟೂರ್ಸ್ ಅಂಡ್ ಟ್ರಾವೆಲ್ಸ್‌ಗೆ ಸೇರಿದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾದ ಘಟನೆ ಗುರುವಾರ ಬೆಳಗಿನ ಜಾವ ಆನಂದಪುರದ ಮುಂಬಾಳು ಸಮೀಪ ನಡೆದಿದೆ. ಬೆಳಿಗ್ಗೆ ಸುಮಾರು 5.45ರ ವೇಳೆಗೆ ಬಸ್‌ನ ಬ್ಯಾಟರಿ ಬಳಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಚಾಲಕನ ಸೀಟಿನ ಸಮೀಪ ಹೊಗೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣ ಎಚ್ಚೆತ್ತ ಚಾಲಕ ಫೈರ್ ಎಕ್ಸ್‌ಟಿಂಗ್ವಿಷರ್ ಬಳಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ, ಬೆಂಕಿ ಕ್ಷಣಾರ್ಧದಲ್ಲೇ ಬಸ್‌ನ ಇತರೆ ಭಾಗಗಳಿಗೂ ವ್ಯಾಪಿಸಿದೆ. ಬಸ್ ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದು, ಶಿವಮೊಗ್ಗ ಹಾಗೂ ಕುಂಸಿ ಭಾಗಗಳಲ್ಲಿ ಬಹುತೇಕ ಪ್ರಯಾಣಿಕರು ಇಳಿದಿದ್ದರು. ಸಾಗರದತ್ತ ಪ್ರಯಾಣಿಸುತ್ತಿದ್ದ ಕೆಲವೇ ಪ್ರಯಾಣಿಕರು ಬಸ್‌ನಲ್ಲಿದ್ದರು. ಚಾಲಕ ಸಮಯಪ್ರಜ್ಞೆ ಮೆರೆದು ಪ್ರಯಾಣಿಕರು ಹಾಗೂ ಅವರ ಲಗೇಜ್‌ಗಳನ್ನು ಸುರಕ್ಷಿತವಾಗಿ ಕೆಳಗಿಳಿಸಿ, ಮತ್ತೊಂದು ಬಸ್‌ನಲ್ಲಿ ಸಾಗರಕ್ಕೆ ಕಳುಹಿಸಿಕೊಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭ...

ಹಿರಿಯ ನಟ ನಾನಾ ಪಾಟೇಕರ್ ನಿಧನ..! 75ನೇ ವಯಸ್ಸಿನಲ್ಲಿ ಚಿತ್ರರಂಗದ ಹಿರಿಯ ಕಲಾವಿದ ಇನ್ನಿಲ್ಲ ಥಂಬ್‌ನೇಲ್

Image
ಹಿರಿಯ ನಟ ನಾನಾ ಪಾಟೇಕರ್ ನಿಧನ: 75ನೇ ವಯಸ್ಸಿನಲ್ಲಿ ಚಿತ್ರರಂಗದ ಹಿರಿಯ ಕಲಾವಿದ ಇನ್ನಿಲ್ಲ ಗೋವಾ : ಭಾರತೀಯ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ಸಮಾಜಸೇವಕ ನಾನಾ ಪಾಟೇಕರ್ ಅವರು 75ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರ ನಿಧನವನ್ನು ಪುತ್ರ ಮಲ್ಹಾರ್ ಪಾಟೇಕರ್ ಖಚಿತಪಡಿಸಿದ್ದಾರೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯಕೀಯ ತಂಡವನ್ನು ಅವರ ನಿವಾಸಕ್ಕೆ ಕರೆಸಲಾಗಿತ್ತು. ಬಳಿಕ ಅವರನ್ನು ಗೋವಾದ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ವೈದ್ಯರು ಸುಮಾರು 45 ನಿಮಿಷಗಳ ಕಾಲ CPR ಮೂಲಕ ನಾನಾ ಪಾಟೇಕರ್ ಅವರ ಪ್ರಾಣ ಉಳಿಸಲು ಪ್ರಯತ್ನಿಸಿದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಬೆಳಗ್ಗೆ 5:20ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಹೃದಯ ಸ್ತಂಭನವೇ ಸಾವಿಗೆ ಕಾರಣವಾಗಿರುವ ಸಾಧ್ಯತೆ ಇದ್ದು, ಸಾವಿನ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. 1951ರ ಜನವರಿ 1ರಂದು ಮಹಾರಾಷ್ಟ್ರದಲ್ಲಿ ಜನಿಸಿದ ನಾನಾ ಪಾಟೇಕರ್, 1978ರಲ್ಲಿ ಗಮನ್ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ್ದರು. ಪರಿಂಡಾ, ಕ್ರಾಂತಿವೀರ್, ಅಗ್ನಿಸಾಕ್ಷಿ, ಖಾಮೋಶಿ, ಅಬ್ ತಕ್ ಛಪ್ಪನ್, ವೆಲ್‌ಕಮ್, ನಟಸಮ್ರಾಟ್ ಹಾಗೂ ಕಾಲಾ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ಅಭಿನಯಿಸಿ ತಮ್ಮದೇ ಆದ ಛಾಪು ಮೂಡಿಸಿದ್ದರು. ನಾನಾ ಪಾಟೇಕರ್ ಅವರು ನಟನೆಯ ಜೊತೆಗೆ ನಿರ್ದೇಶಕರಾಗಿಯೂ ಗುರುತಿಸಿಕೊಂಡಿದ್ದರು. ವಿಭಿನ್ನ ಪಾತ್...

ಶಿವಮೊಗ್ಗದಲ್ಲಿ ಭರ್ಜರಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು..! 1.02 ಕೋಟಿ ಮೌಲ್ಯದ ಚಿನ್ನ, ನಗದು ಸೇರಿ ವಸ್ತುಗಳು ವಶಕ್ಕೆ..

Image
ಶಿವಮೊಗ್ಗದಲ್ಲಿ ಭರ್ಜರಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು.. 1.02 ಕೋಟಿ ಮೌಲ್ಯದ ಚಿನ್ನ, ನಗದು ಸೇರಿ ವಸ್ತುಗಳು ವಶಕ್ಕೆ.. ! ಶಿವಮೊಗ್ಗ : ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದ ವಾಸದ ಮನೆಯಲ್ಲಿ ಯಾರೋ ಕಳ್ಳ ಮನೆಯ ಬಾಗಿಲಿನ ಬೀಗವನ್ನು ಮುರಿದು, ಮನೆಯ ಒಳಗಿದ್ದ ಸುಮಾರು 943 ಗ್ರಾಂ ತೂಕದ ಬಂಗಾರದ ಒಡವೆಗಳು, 500 ಗ್ರಾಂ ಬೆಳ್ಳಿ ವಸ್ತುಗಳು, 86,000 ನಗದು ಹಣ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಿದ್ದ ಬಗ್ಗೆ ದೂರು ನೀಡಲಾಗಿತ್ತು. ಈ ದೂರಿನ ಮೇರೆಗೆ ಕೋಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ.175/2026 ಕಲಂ 331(3), 305 ಬಿಎನ್‌ಎಸ್ ರೀತ್ಯಾ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಆರೋಪಿಯನ್ನು ಹಾಗೂ ಕಳುವಾಗಿದ್ದ ಮಾಲನ್ನು ಪತ್ತೆ ಮಾಡುವ ಬಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ನಿಖಿಲ್ ಬಿ. ಐಪಿಎ ಸ್ ರವರ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಕಾರಿಯಪ್ಪ ಹಾಗೂ ಶಿವಮೊಗ್ಗ ಉಪವಿಭಾಗದ ಡಿವೈಎಸ್‌ಪಿ ಶ್ರೀ ಶೀಲವಂತ ಹೊಸಮನಿ ರವರ ಮಾರ್ಗದರ್ಶನದಲ್ಲಿ ಕೋಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಶ್ರೀ ಹರೀಶ್ ಕೆ. ಪಟೇಲ್ ಹಾಗೂ ಸಿಬ್ಬಂದಿಯವರನ್ನು ಒಳಗೊಂಡ ತಂಡವನ್ನು ರಚಿಸಲಾಗಿತ್ತು. ಸದರಿ ತನಿಖಾ ತಂಡವು ದಿ. 01/10/2025 ರಂದು ಆರೋಪಿತನಾದ ಮೊಹಮ್ಮದ್ ರಫೀಕ್ @ ಕರಿಯ, ಹಗರಿಬೊಮ್ಮನಹಳ್ಳಿ ವಾಸಿ ಈತನನ್ನು ದಸ್ತಗಿರಿ ಮಾಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತನಿಂ...

ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಆರೋಪ ಸಾಬೀತು..! ಆರೋಪಿತರಿಗೆ 10 ವರ್ಷ ಕಠಿಣ ಜೈಲು..!

Image
  ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಆರೋಪಿತರಿಗೆ 10 ವರ್ಷ ಕಠಿಣ ಕಾರಾಗೃಹ ಶಿವಮೊಗ್ಗ : ಆಗುಂಬೆ ಠಾಣಾ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಜ್ಯೋತಿ (24) ಎಂಬುವವರ ವರದಕ್ಷಿಣೆ ಸಾವು ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಆರೋಪಿತರಿಗೆ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿದೆ. ಜ್ಯೋತಿ ಅವರಿಗೆ ಅವರ ಪತಿ ದಯಾಂದ್ (37) ಮತ್ತು ಅತ್ತೆ ಸುಮಿತ್ರಾ (65) ಅವರು ವರದಕ್ಷಿಣೆ ಹಣಕ್ಕಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಜ್ಯೋತಿ ಅವರು 2021ರ ಮೇ 23ರಂದು ನೇಣು ಬಿಗಿದುಕೊಂಡು ಮೃತಪಟ್ಟಿದ್ದರು. ಈ ಸಂಬಂಧ ಆಗುಂಬೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ . 51/2021ರ ಅಡಿಯಲ್ಲಿ ವರದಕ್ಷಿಣಾ ಸಾವು ಹಾಗೂ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ನಡೆಸಿದ ಅಂದಿನ ತನಿಖಾಧಿಕಾರಿ ಶಾಂತವೀರ್ ಇ.ಡಿ., ವೈಎಸ್‌ಪಿ ಅವರು ಆರೋಪಿತರ ವಿರುದ್ಧ ದೋಷಾರೋಪಣ ಪತ್ರ ಸಲ್ಲಿಸಿದ್ದರು. ನಂತರ ಶಿವಮೊಗ್ಗದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಮಮತಾ ಬಿ.ಎಸ್. ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ಶ್ರೀ ಯಶವಂತ ಕುಮಾರ್ ಅವರು ಆರೋಪಿತರಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ₹2,24...

ಅಣ್ಣಾನಗರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್..! ಓರ್ವ ಆರೋಪಿ ಬಂಧನ – ಆಯುಧ, ಬೈಕ್ ವಶಕ್ಕೆ..!

Image
  ಅಣ್ಣಾನಗರ ಕೊಲೆ ಪ್ರಕರಣ: ಓರ್ವ ಆರೋಪಿ ಬಂಧನ ಶಿವಮೊಗ್ಗ : ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಣ್ಣಾನಗರ ಚಾನೆಲ್ ಏರಿ ರಸ್ತೆಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. 2026ರ ಅಕ್ಟೋಬರ್ 3ರಂದು ರಾತ್ರಿ ಅಣ್ಣಾನಗರ ಚಾನೆಲ್ ಏರಿ ರಸ್ತೆಯಲ್ಲಿ ಮೊಹಮದ್ ಅಲಿ ಬಿನ್ ಲೇಟ್ ಅಬ್ದುಲ್ ರೆಹಮಾನ್ (37) ಎಂಬುವವರ ಮೇಲೆ ದುಷ್ಕರ್ಮಿಗಳು ತೀವ್ರವಾಗಿ ಹಲ್ಲೆ ನಡೆಸಿ ಕೊಲೆ ಮಾಡಿ, ಮೃತದೇಹವನ್ನು ರಸ್ತೆಯ ಬದಿಯಲ್ಲಿ ಹಾಕಿ ತೆರಳಿದ್ದರು. ಈ ಕುರಿತು ಮೃತನ ಸಹೋದರ ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 322/2026 , ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 103(1) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ತನಿಖೆ ಮುಂದುವರಿಸಿದ ಪೊಲೀಸರು ಅಕ್ಟೋಬರ್ 5ರಂದು ಸೈಯ್ಯದ್ ಜಿಲಾನ್ ಅಲಿಯಾಸ್ 360 (23) ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಶಿವಮೊಗ್ಗದ ಅಶೋಕನಗರ 3ನೇ ಕ್ರಾಸ್ ನಿವಾಸಿಯಾಗಿದ್ದು, ಟೈಲ್ಸ್ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಲಾಗಿದೆ ಎಂದು ಹೇಳಲಾದ ಆಯುಧ ಹಾಗೂ ಬೈಕ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ...

ಶಾಂತಿನಗರದಲ್ಲಿ ಪಾರ್ಕ್ ನಿರ್ಮಾಣಕ್ಕೆ ಮನವಿ..! ನೂತನ ಸೂಡಾ ಅಧ್ಯಕ್ಷರಿಗೆ ನಾಗರಿಕ ಹಕ್ಕುಗಳ ವೇದಿಕೆ ಮನವಿ..!!

Image
  ಶಾಂತಿನಗರದಲ್ಲಿ ಪಾರ್ಕ್ ನಿರ್ಮಾಣಕ್ಕೆ ನೂತನ ಸೂಡಾ ಅಧ್ಯಕ್ಷರಿಗೆ ಮನವಿ ಶಿವಮೊಗ್ಗ : ಶಾಂತಿನಗರ ನಾಗರಿಕ ಹಕ್ಕುಗಳ ವೇದಿಕೆ ವತಿಯಿಂದ ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾದ ಶ್ರೀ ಮಧುಸೂಧನ್ ಸಿ.ಜಿ . ಅವರನ್ನು ಭೇಟಿಯಾಗಿ ಶುಭಕೋರಲಾಯಿತು. ಇದೇ ಸಂದರ್ಭದಲ್ಲಿ ಶಾಂತಿನಗರದ ಜನತೆಯ ಅನುಕೂಲಕ್ಕಾಗಿ ಪಾರ್ಕ್ ನಿರ್ಮಾಣ ಮಾಡಿಕೊಡುವಂತೆ ವೇದಿಕೆಯ ಅಧ್ಯಕ್ಷರಾದ ಸಯ್ಯದ್ ಮುಜಿಬುಲ್ಲ ಅವರ ನೇತೃತ್ವದಲ್ಲಿ ನೂತನ ಸೂಡಾ ಅಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು. ಶಾಂತಿನಗರದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಪಾರ್ಕ್ ನಿರ್ಮಾಣವಾದರೆ, ಸ್ಥಳೀಯ ನಿವಾಸಿಗಳಿಗೆ ವಾಯುವಿಹಾರ ಹಾಗೂ ಆರೋಗ್ಯಕರ ವಾತಾವರಣ ಕಲ್ಪಿಸುವುದರ ಜೊತೆಗೆ ಮಕ್ಕಳು ಮತ್ತು ಹಿರಿಯರಿಗೆ ಉತ್ತಮ ಸಾರ್ವಜನಿಕ ಸ್ಥಳ ದೊರೆಯಲಿದೆ ಎಂದು ವೇದಿಕೆ ಸದಸ್ಯರು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ , ಕಾರ್ಮಿಕ ಮುಖಂಡರಾದ ಅಪ್ಸರ್ ಭಾಷಾ, ಶಾಂತಿನಗರದ ಮುಖಂಡರಾದ ಪ್ರಸನ್ನ ಕುಮಾರ್, ನೂರುಲ್ಲಾ ಖಾನ್, ಕರವೇ ಸಾದಿಕ್, ಸುಭಾನ್, ಸಯ್ಯದ್ ಶಫಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ.ನದೀಮ್ ಕೆ ಎಂ

ಹವಾ ಮೆಂಟೇನ್ ಮಾಡಲು ಮಚ್ಚು ಬೀಸಿದ ಗ್ಯಾಂಗ್ ಅರೆಸ್ಟ್..! ಗಣೇಶ ಹಬ್ಬದ ವೇಳೆ 4 ಮಂದಿಗೆ ಹಲ್ಲೆ – 11 ಮಂದಿ ಬಂಧನ..!

Image
  ಗಣೇಶ ಹಬ್ಬದ ವೇಳೆ ಹವಾ ಮೆಂಟೇನ್ ಮಾಡಲು ಮಚ್ಚು ಬೀಸಿದ ಗ್ಯಾಂಗ್ ಅರೆಸ್ಟ್..! ಬೆಂಗಳೂರು: ಏರಿಯಾದಲ್ಲಿ ಹವಾ ಮೆಂಟೇನ್ ಮಾಡಲು ಗ್ಯಾಂಗ್ ಕಟ್ಟಿಕೊಂಡು ಸಿಕ್ಕ ಸಿಕ್ಕವರ ಮೇಲೆ ಲಾಂಗು, ಮಚ್ಚು, ಚಾಕು ಹಾಗೂ ಡ್ರ್ಯಾಗರ್‌ನಿಂದ ದಾಳಿ ಮಾಡುತ್ತಿದ್ದ ಆರೋಪಿಗಳ ಗ್ಯಾಂಗ್‌ನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಗಣೇಶ ಹಬ್ಬದ ಸಮಯದಲ್ಲಿ ಎದುರಾಳಿ ಗ್ಯಾಂಗ್‌ನ ಸ್ಯಾಂಡಿ ಎಂಬಾತನನ್ನು ಹುಡುಕಿಕೊಂಡು ಹೋಗಿದ್ದ ಆರೋಪಿಗಳು, ಸ್ಯಾಂಡಿ ಬಗ್ಗೆ ಮಾಹಿತಿ ನೀಡದ ನಾಲ್ವರು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಳೆದ ತಿಂಗಳ 20ರಂದು ಉತ್ತರಹಳ್ಳಿ ಆರ್ಚ್ ಬಳಿಯ ಖಾಲಿ ಸೈಟ್‌ಗೆ ಸ್ಯಾಂಡಿಯನ್ನು ಹುಡುಕಿಕೊಂಡು ಆರೋಪಿಗಳ ಗ್ಯಾಂಗ್ ತೆರಳಿತ್ತು. ಈ ವೇಳೆ ಅಲ್ಲಿದ್ದ ಇಬ್ಬರನ್ನು ಸ್ಯಾಂಡಿ ಎಲ್ಲಿದ್ದಾನೆ ಎಂದು ವಿಚಾರಿಸಿದ್ದಾರೆ. ಸ್ಯಾಂಡಿ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಕ್ಕೆ ಇಬ್ಬರ ಮೇಲೂ ಡ್ರ್ಯಾಗರ್ ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಳಿಕ ಅಲ್ಲಿಂದ ಸ್ವಲ್ಪ ದೂರದಲ್ಲಿದ್ದ ಮತ್ತೊಂದು ಸ್ಥಳಕ್ಕೆ ತೆರಳಿದ ಆರೋಪಿಗಳು, ಕಿರಣ್ ಎಂಬಾತನ ಮೇಲೂ ಆರೇಳು ಜನರ ಗುಂಪಿನಲ್ಲಿ ದಾಳಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಮೀನಿನ ಅಂಗಡಿ ಬಳಿ ಫಿಶ್ ತಿನ್ನಲು ಕುಳಿತಿದ್ದ ರವಿಚಂದ್ರನ್ ಎಂಬಾತನ ಮೇಲೂ ದಾಳಿ ನಡೆಸಲಾಗಿದೆ. ಮಣಿ, ಮನು ಹಾಗೂ ಕುಳ್ಳು ಎಂಬುವರು ರವಿಚಂದ್ರನ್ ಮೇಲ...

ಹಿಂಡ್ಲೆಮನೆಯಲ್ಲಿ ಚಿರತೆ ದಾಳಿ..! 2 ವರ್ಷದ ಕರು ಸಾವು

Image
  ಚಿರತೆ ದಾಳಿಗೆ ಕರು ಬಲಿ: ಹಿಂಡ್ಲೆಮನೆ ಗ್ರಾಮಸ್ಥರಲ್ಲಿ ಆತಂಕ ಹೊಸನಗರ : ತಾಲೂಕಿನ ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿಂಡ್ಲೆಮನೆ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ವರ್ಷದ ಕರು ಮೃತಪಟ್ಟಿರುವ ಘಟನೆ ನಡೆದಿದೆ. ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಹಿಂಡ್ಲೆಮನೆಯ ಶ್ರೀಮತಿ ಎಂಬುವರಿಗೆ ಸೇರಿದ ಎರಡು ವರ್ಷದ ಕರುವನ್ನು ಎಂದಿನಂತೆ ಮೇಯಲು ಬಿಟ್ಟಿದ್ದ ವೇಳೆ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ. ಕರುವಿನ ಗಂಟಲಿನ ಭಾಗಕ್ಕೆ ಚಿರತೆ ಗಂಭೀರವಾಗಿ ಗಾಯಗೊಳಿಸಿದೆ. ಚಿರತೆಯ ದಾಳಿಯಿಂದ ತಪ್ಪಿಸಿಕೊಂಡ ಕರು ಹೇಗೋ ಮನೆ ಕಡೆಗೆ ಮರಳಿದೆ. ಆದರೆ ಗಂಟಲಿನ ಭಾಗಕ್ಕೆ ತೀವ್ರ ಗಾಯವಾಗಿದ್ದರಿಂದ ಕೆಲವೇ ಸಮಯದಲ್ಲಿ ಮೃತಪಟ್ಟಿದೆ ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ಹಿಂಡ್ಲೆಮನೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಇದೀಗ ಜಾನುವಾರು ಮೇಲೆ ದಾಳಿ ನಡೆಸಿರುವ ಘಟನೆ ಗ್ರಾಮಸ್ಥರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. ಜನರು ಹಾಗೂ ಜಾನುವಾರುಗಳ ಸುರಕ್ಷತೆ ದೃಷ್ಟಿಯಿಂದ ಅರಣ್ಯ ಇಲಾಖೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಚಿರತೆಯ ಚಲನವಲನ ಪತ್ತೆಹಚ್ಚಿ ಅಗತ್ಯ ಕ್ರಮ ಕೈಗೊಂಡು ಚಿರತೆಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಮನೆಯ ಸುತ್ತಮುತ್ತ ಹಾಗೂ ಜಾನುವಾರುಗಳನ್ನು ಮೇಯಿಸಲು ಕರೆದೊಯ್ಯುವ ಸಂದರ್ಭದಲ್ಲಿ ಹೆಚ್ಚ...

ಶಿವಮೊಗ್ಗ ಅಣ್ಣಾನಗರದಲ್ಲಿ ಯುವಕನ ಭೀಕರ ಹತ್ಯೆ..! ಮಾರಕಾಸ್ತ್ರಗಳಿಂದ ಹಲ್ಲೆ – ಪೊಲೀಸರ ತನಿಖೆ ಚುರುಕು

Image
 ಶಿವಮೊಗ್ಗ ಅಣ್ಣಾನಗರದಲ್ಲಿ ಯುವಕನ ಹತ್ಯೆ..! ಮಾರಕಾಸ್ತ್ರಗಳಿಂದ ಹಲ್ಲೆ – ಗಾಂಜಾ ಸೇವನೆ ವೇಳೆ ಮನಸ್ತಾಪದ ಶಂಕೆ ಶಿವಮೊಗ್ಗ : ನಗರದ ಅಣ್ಣಾನಗರ ಸಮೀಪ ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಅಲಿ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಲಿ ಹಾಗೂ ಕೆಲವರು ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಪರಸ್ಪರ ಮನಸ್ತಾಪ ಉಂಟಾಗಿ ಜಗಳ ನಡೆದಿದ್ದು, ಇದೇ ವೇಳೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿರಬಹುದು ಎನ್ನಲಾಗಿದೆ. ಆದರೆ ಗಾಂಜಾ ಸೇವನೆ ವಿಚಾರವಾಗಲಿ, ಜಗಳದ ಕಾರಣವಾಗಲಿ ಅಥವಾ ಹತ್ಯೆಯಲ್ಲಿ ಭಾಗಿಯಾಗಿರುವವರ ಕುರಿತಾಗಲಿ ಸದ್ಯ ಯಾವುದೇ ಅಧಿಕೃತ ದೃಢೀಕರಣವಾಗಿಲ್ಲ. ಸ್ಥಳೀಯರಿಂದ ಕೇಳಿಬಂದಿರುವ ಮಾಹಿತಿ ಆಧಾರದ ಮೇಲಷ್ಟೇ ಈ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಹತ್ಯೆಗೆ ನಿಖರ ಕಾರಣವೇನು? ಅಲಿಯ ಮೇಲೆ ಹಲ್ಲೆ ನಡೆಸಿದವರು ಯಾರು? ಹತ್ಯೆಯ ಹಿಂದೆ ವೈಯಕ್ತಿಕ ದ್ವೇಷವೇ ಅಥವಾ ಬೇರೆ ಕಾರಣವೇ? ಎಂಬ ಹಲವು ಪ್ರಶ್ನೆಗಳಿಗೆ ಪೊಲೀಸರ ತನಿಖೆಯಿಂದಲೇ ಉತ್ತರ ಸಿಗಬೇಕಿದೆ. ಸದ್ಯ ಪೊಲೀಸರು ಘಟನೆಯ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದು, ಆರೋಪಿಗಳ ಪತ್ತೆ ಹಾಗೂ ಘಟನೆಗೆ ನಿಖರ ಕಾರಣವನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ...

ಅತಿವೇಗದ ವಾಹನಕ್ಕೆ ಎರಡು ಗೋವುಗಳು ಬಲಿ! ವಾಹನ ಪತ್ತೆಗೆ ಪೊಲೀಸರ ಕ್ರಮ

Image
  ರಿಪ್ಪನ್‌ಪೇಟೆಯಲ್ಲಿ ಭೀಕರ ಅಪಘಾತ: ಎರಡು ಗೋವುಗಳು ಸ್ಥಳದಲ್ಲೇ ಸಾವು! ರಿಪ್ಪನ್‌ಪೇಟೆ : ಬೆಳಗಿನ ಜಾವ ಸಂಭವಿಸಿದ ಅಪಘಾತದಲ್ಲಿ ಎರಡು ಗೋವುಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೆರಡು ಗೋವುಗಳು ಗಾಯಗೊಂಡಿರುವ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಎದುರು ಗುರುವಾರ ನಡೆದಿದೆ. ಗುರುವಾರ ಬೆಳಗಿನ ಜಾವ ಸುಮಾರು 4.30ರ ವೇಳೆಯಲ್ಲಿ ಅತಿವೇಗವಾಗಿ ಸಂಚರಿಸುತ್ತಿದ್ದ ವಾಹನವು ಗೋವುಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಗೋವುಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೆರಡು ಗೋವುಗಳು ಗಾಯಗೊಂಡಿವೆ. ಅಪಘಾತಕ್ಕೆ ಕಾರಣವಾದ ವಾಹನ ಕ್ಯಾಂಟರ್ ಆಗಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ ಅಪಘಾತಕ್ಕೆ ಕಾರಣವಾದ ವಾಹನ ಹಾಗೂ ಚಾಲಕನ ಕುರಿತು ಈವರೆಗೆ ಯಾವುದೇ ಖಚಿತ ಮಾಹಿತಿ ಲಭ್ಯವಾಗಿಲ್ಲ. ಘಟನೆ ಗಮನಕ್ಕೆ ಬರುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರು ಗಾಯಗೊಂಡಿದ್ದ ಎರಡು ಗೋವುಗಳಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ, ಅವುಗಳನ್ನು ಸಂತೈಸುವ ಕಾರ್ಯ ನಡೆಸಿದ್ದಾರೆ. ಬಳಿಕ ಮೃತಪಟ್ಟ ಎರಡು ಗೋವುಗಳ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಇನ್ನು ಘಟನೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ವರದಿ ನದೀಮ್ ಕೆ ಎಂ

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷ! ಸಿ.ಜಿ. ಮಧುಸುದನ್ ನೇಮಕ”

Image
  ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷರ ನೇಮಕ ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (SUDA) ದ ಅಧ್ಯಕ್ಷರಾಗಿ ಸಿ.ಜಿ. ಮಧುಸುದನ್ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987ರ ಕಲಂ 3(3) ಮತ್ತು 3(4) ರ ಅಡಿಯಲ್ಲಿ ಸರ್ಕಾರಕ್ಕೆ ಇರುವ ಅಧಿಕಾರವನ್ನು ಚಲಾಯಿಸಿ ಈ ನೇಮಕಾತಿ ಮಾಡಲಾಗಿದೆ. 2026ರ ಅಕ್ಟೋಬರ್ 1ರಂದು ಹೊರಡಿಸಿರುವ ಅಧಿಸೂಚನೆಯಂತೆ, ಶಿವಮೊಗ್ಗದ ಕುವೆಂಪು ನಗರದ ನಿವಾಸಿ ಸಿ.ಜಿ. ಮಧುಸುದನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಈ ಕುರಿತು ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿಗಳು ಅಧಿಕೃತ ಆದೇಶ ಹೊರಡಿಸಿದ್ದಾರೆ. ನೇಮಕಾತಿ ಆದೇಶ ಹೊರಬಿದ್ದ ಹಿನ್ನೆಲೆಯಲ್ಲಿ, ರಾಗಿಗುಡ್ಡದ ಯುವಮುಖಂಡ ಮೋಸಿನ್ ಖಾನ್ ಅವರು ಸೂಡ ಕಚೇರಿಗೆ ಭೇಟಿ ನೀಡಿ ನೂತನ ಅಧ್ಯಕ್ಷರಾದ ಸಿ.ಜಿ. ಮಧುಸುದನ್ ಅವರನ್ನು ಅಭಿನಂದಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸಿ.ಜಿ. ಮಧುಸುದನ್ ಅವರು ಅಧಿಕಾರ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾ...

ಪ್ರಿಪೇಡ್ ಆಟೋ ಬಳಸಿ! ಪ್ರಯಾಣಿಕರಿಗೆ ಸಿಪಿಐ ದೇವರಾಜ್ ಖಡಕ್ ಸೂಚನೆ

Image
  ಪ್ರಿಪೇಡ್ ಆಟೋ ಸೌಲಭ್ಯ ಬಳಸಿಕೊಳ್ಳಿ: ಸಿಪಿಐ ದೇವರಾಜ್ ಶಿವಮೊಗ್ಗ: ರೈಲ್ವೆ ನಿಲ್ದಾಣ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕಲ್ಪಿಸಿರುವ ಪ್ರಿಪೇಡ್ ಆಟೋ ಸೌಲಭ್ಯವನ್ನು ಸಾರ್ವಜನಿಕರು ಕಡ್ಡಾಯವಾಗಿ ಬಳಸಿಕೊಳ್ಳಬೇಕು ಎಂದು ಸಂಚಾರಿ ಪೊಲೀಸ್ ನಿರೀಕ್ಷಕರಾದ ದೇವರಾಜ್ ಮನವಿ ಮಾಡಿದ್ದಾರೆ. ನಗರದ ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಬೆಳಗಿನ ಜಾವ ಅನಿರೀಕ್ಷಿತವಾಗಿ ಭೇಟಿ ನೀಡಿದ ಸಂಚಾರಿ ಪೊಲೀಸ್ ನಿರೀಕ್ಷಕ ದೇವರಾಜ್ ಅವರು, ತಮ್ಮ 20ಕ್ಕೂ ಹೆಚ್ಚು ಸಿಬ್ಬಂದಿಯೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಸಾರ್ವಜನಿಕರಲ್ಲಿ ಪ್ರಿಪೇಡ್ ಆಟೋ ಕುರಿತು ಅರಿವು ಮೂಡಿಸಿದರು. ರೈಲ್ವೆ ನಿಲ್ದಾಣದಲ್ಲಿ ಈಗಾಗಲೇ ಪ್ರಿಪೇಡ್ ಆಟೋ ಸೌಲಭ್ಯವಿದ್ದರೂ, ಕೆಲವು ಆಟೋ ಚಾಲಕರು ಪ್ರಯಾಣಿಕರಿಂದ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದ್ದವು. ಬೆಳಗಿನ ಜಾವ 5.30ರವರೆಗೆ ಮೀಟರ್ ದರದ ಒಂದೂವರೆ ಪಟ್ಟು ಹಣ ಪಡೆಯಲು ಅವಕಾಶವಿದ್ದರೂ, ಕೆಲವು ಚಾಲಕರು ನಿಯಮ ಮೀರಿ ಪ್ರಯಾಣಿಕರಿಗೆ ತೊಂದರೆ ನೀಡುತ್ತಿರುವುದು ಪೊಲೀಸರ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಸಂಚಾರಿ ಪೊಲೀಸರು ಕೇವಲ 20 ನಿಮಿಷಗಳ ಅವಧಿಯಲ್ಲಿ 115 ಪ್ರಯಾಣಿಕರು ಪ್ರಿಪೇಡ್ ಆಟೋ ಸೌಲಭ್ಯ ಪಡೆಯುವಂತೆ ಕ್ರಮ ಕೈಗೊಂಡರು. ಅದೇ ರೀತಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯೂ ಪರಿಶೀಲನೆ ನಡೆಸಲಾಗಿದ್ದು, ಕೇವಲ ಒಂದು ಗಂ...

ಅಮ್ಮನಘಟ್ಟ ಜೇನುಕಲ್ಲಮ್ಮ ಜಾತ್ರೆ! ಭಕ್ತ ಜನಸಾಗರ – ವೈಭವದ ಆಚರಣೆ

Image
ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರೆಗೆ ಭಕ್ತ ಜನಸಾಗರ: ಹರಕೆ, ಪ್ರಾರ್ಥನೆ, ಪೂಜೆಯೊಂದಿಗೆ ವೈಭವದ ಆಚರಣೆ ಮುಂಜಾನೆ ಮುಗಿಲು ಕವಿಯುವ ಮುನ್ನವೇ ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತ ಭಕ್ತರು… ಕೈಯಲ್ಲಿ ಹಣ್ಣು-ಕಾಯಿ, ಮನದಲ್ಲಿ ನಂಬಿಕೆ… ತಮ್ಮ ಇಷ್ಟಾರ್ಥ ಈಡೇರಲಿ, ಬೆಳೆ ಸಮೃದ್ಧಿಯಾಗಲಿ, ಉತ್ತಮ ಮಳೆಯಾಗಲಿ ಎಂದು ದೇವಿಯ ಮೊರೆ ಹೋದ ಭಕ್ತ ಸಮೂಹ. ಹೀಗೆ ಭಕ್ತಿ ಮತ್ತು ನಂಬಿಕೆಯ ಸಂಗಮಕ್ಕೆ ಸಾಕ್ಷಿಯಾಯಿತು ರಿಪ್ಪನ್‌ಪೇಟೆ ಸಮೀಪದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ. ರಿಪ್ಪನ್‌ಪೇಟೆ : ಸಮೀಪದ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು. ಪಿತೃ ಪಕ್ಷದ ಸಂದರ್ಭದಲ್ಲಿ ನಡೆಯುವ ಈ ಜಾತ್ರೆಯ ಮೊದಲ ಮಂಗಳವಾರದಂದು ಮುಂಜಾನೆಯಿಂದಲೇ ಸುತ್ತಮುತ್ತಲಿನ ಗ್ರಾಮಗಳಿಂದ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಹಣ್ಣು-ಕಾಯಿ ಸಮರ್ಪಿಸಿ ತಮ್ಮ ಭಕ್ತಿಯನ್ನು ಮೆರೆದರು. ಜೇನುಕಲ್ಲಮ್ಮ ದೇವಿಯ ಜಾತ್ರೆಗೆ ಸರ್ವಜನಾಂಗದ ಭಕ್ತರು ಆಗಮಿಸಿ ತಮ್ಮ ಇಷ್ಟಾರ್ಥಗಳು ಈಡೇರಲೆಂದು ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮದುವೆ, ಸಂತಾನ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಪರಿಹಾರ ದೊರೆಯಲೆಂದು ಹಲವರು ದೇವಿಯ ಸನ್ನಿಧಿಯಲ್ಲಿ ಹರಕೆ ಮಾಡಿಕೊಂಡರು. ಇನ್ನು ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಬ...

ಶಿವಮೊಗ್ಗದಲ್ಲಿ Medical Icons ಪ್ರಸಾದ ವಿನಿಯೋಗ! ಒಗ್ಗಟ್ಟು, ಸೇವಾ ಮನೋಭಾವಕ್ಕೆ ಸಾಕ್ಷಿಯಾದ ಕಾರ್ಯಕ್ರಮ

Image
  ಶಿವಮೊಗ್ಗ: ಒಗ್ಗಟ್ಟು ಮತ್ತು ಸೇವಾ ಮನೋಭಾವ ಮೆರೆದ Medical Icons ಕುಟುಂಬ ಶಿವಮೊಗ್ಗ : ಶುಕ್ರವಾರ ನಡೆದ Medical Icons ಕುಟುಂಬದ ಪ್ರಸಾದ ವಿನಿಯೋಗ ಕಾರ್ಯಕ್ರಮವು ಆತ್ಮೀಯ ಹಾಗೂ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಸಂಘಟನೆಯ ಪದಾಧಿಕಾರಿಗಳು, ಸದಸ್ಯರು, ದಾನಿಗಳು ಹಾಗೂ ಸ್ನೇಹಿತರು ಒಗ್ಗಟ್ಟಿನಿಂದ ಭಾಗವಹಿಸಿ ಪ್ರಸಾದ ವಿತರಣೆ ಸೇರಿದಂತೆ ವಿವಿಧ ಸೇವಾ ಕಾರ್ಯಗಳಲ್ಲಿ ಕೈಜೋಡಿಸಿದರು. ಗೌರವ ಅಧ್ಯಕ್ಷರಾದ ಹೇಮಣ್ಣ, ಅಧ್ಯಕ್ಷರಾದ ಮಂಜುನಾಥ್ ಎಂ.ಎಲ್., ಉಪಾಧ್ಯಕ್ಷರಾದ ಜಯರಾಜ್ ಹಾಗೂ ಸತೀಶ್, ಕಾರ್ಯದರ್ಶಿ ಮಂಜುನಾಥ್ ಬಿ., ಸಂಘಟನಾ ಕಾರ್ಯದರ್ಶಿ ಗುರುರಾಜ್ ಸೇರಿದಂತೆ ಪದಾಧಿಕಾರಿಗಳು ಕಾರ್ಯಕ್ರಮದ ಯಶಸ್ಸಿಗೆ ಪ್ರಮುಖವಾಗಿ ಸಹಕರಿಸಿದರು. ಸದಸ್ಯರು ಹಾಗೂ ಸಹ ಕಾರ್ಯದರ್ಶಿಗಳು ಕೂಡ ಪ್ರಸಾದ ವಿತರಣೆ, ನೀರು, ಪ್ಲೇಟ್‌ಗಳ ವ್ಯವಸ್ಥೆ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು. ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿ ಪ್ರಸಾದ ಸ್ವೀಕರಿಸುವುದರ ಜೊತೆಗೆ ಸ್ವತಃ ಪ್ರಸಾದ ವಿತರಿಸಿ ಸೇವೆಯಲ್ಲಿ ಭಾಗಿಯಾದರು. ADC ಡಾ. ವೀರೇಶ್ ಬಾಬು, ಮಧುಕರ್ ಸರ್, ಷಡಾಕ್ಷರಿ C.S., ಭುವನೇಶ್ವರಿ ಪಾಟೀಲ್, ಮಾಧವ ರಾವ್ ಸರ್ ಹಾಗೂ ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.ಕಜಾನ್ಚಿ ಗಿರೀಶ್ ಕಾರ್ಯಕ್ರಮದ ಸುಂದರ ಕ್ಷಣಗಳನ್ನು ಚಂದ್ರಿಕಾ ಅವರು ಕ್ಯಾಮೆರಾದಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಂಡ...

ಶಿವಮೊಗ್ಗದಲ್ಲಿ ಶಾಂತಿ ಸುವ್ಯವಸ್ಥೆ! | ನಿಖಿಲ್‌ಗೆ ಕರವೇ ಅಭಿನಂದನೆ

Image
  ಶಿವಮೊಗ್ಗ: ಶಾಂತಿ ಸುವ್ಯವಸ್ಥೆ ಕಾಪಾಡಿದ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರಿಗೆ ಕರವೇ ಸ್ವಾಭಿಮಾನಿ ಬಣದಿಂದ ಅಭಿನಂದನೆ ಶಿವಮೊಗ್ಗ ನಗರದಲ್ಲಿ ವಿವಿಧ ಧಾರ್ಮಿಕ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಶಾಂತಿಯುತವಾಗಿ ನಡೆಯಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಕ್ರಮ ಕೈಗೊಂಡ ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ, ಶಾಂತಿನಗರ–ರಾಗಿಗುಡ್ಡ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನಡೆದ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮಗಳು, ಹಿಂದೂ ಮಹಾಸಭಾ ಗಣೇಶೋತ್ಸವದ ಮೆರವಣಿಗೆ ಹಾಗೂ ವಿಸರ್ಜನೆ ಮತ್ತು ಓಂ ಗಣಪತಿ ವಿಸರ್ಜನೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದವು. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದರ ಜೊತೆಗೆ ಮುನ್ನೆಚ್ಚರಿಕಾ ಕ್ರಮವಾಗಿ ಶಾಂತಿ ಸಭೆಗಳನ್ನು ನಡೆಸಿ, ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಾರ್ವಜನಿಕರೊಂದಿಗೆ ಸಮನ್ವಯ ಸಾಧಿಸಲಾಗಿತ್ತು. ಇದರಿಂದಾಗಿ ನಗರದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೌಹಾರ್ದಯುತವಾಗಿ ಹಾಗೂ ಶಾಂತಿಯುತವಾಗಿ ನಡೆಯಲು ಸಾಧ್ಯವಾಯಿತು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ತಿಳಿಸ...

ಶಿವಮೊಗ್ಗದಲ್ಲಿ ಸುನ್ನಿ ಟಿಪ್ಪು ಕಬ್ರಸ್ಥಾನಕ್ಕೆ ಜಾಗ ಮಂಜೂರಿಗೆ ಮುಸ್ಲಿಂ ಸಮುದಾಯ ಮನವಿ

Image
  ಶಿವಮೊಗ್ಗದಲ್ಲಿ ಸುನ್ನಿ ಟಿಪ್ಪು ಕಬ್ರಸ್ಥಾನಕ್ಕೆ ಜಾಗ ಮಂಜೂರಿಗೆ ಮುಸ್ಲಿಂ ಸಮುದಾಯ ಮನವಿ ಶಿವಮೊಗ್ಗ ನಗರದ ಟಿಪ್ಪು ನಗರದಲ್ಲಿರುವ ಸುನ್ನಿ ಟಿಪ್ಪು ಮಸ್ಜಿದ್ ಕಮಿಟಿ ವತಿಯಿಂದ, ಮುಸ್ಲಿಂ ಸಮುದಾಯದ ಕಬ್ರಸ್ಥಾನಕ್ಕಾಗಿ ಸೂಕ್ತ ಜಾಗ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವ ಉದ್ದೇಶದಿಂದ ವಿಶೇಷ “ಸುನ್ನಿ ಟಿಪ್ಪು ಕಬ್ರಸ್ಥಾನ ಜಮೀನು ಕೋರಿಕೆ ಕಾರ್ಯಕ್ರಮ” ಹಮ್ಮಿಕೊಳ್ಳಲಾಯಿತು. ಸುನ್ನಿ ಟಿಪ್ಪು ಮಸ್ಜಿದ್ ಆವರಣದಲ್ಲಿ ನಡೆದ ಕಾರ್ಯಕ್ರಮವು ಮುಕ್ತರ್ ಅಹಮದ್ ಅವರ ಅಧ್ಯಕ್ಷತೆ ಹಾಗೂ ನೇತೃತ್ವದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗವಹಿಸಿ, ಮುಸ್ಲಿಂ ಸಮುದಾಯದ ಅಂತಿಮ ಸಂಸ್ಕಾರಕ್ಕೆ ಅಗತ್ಯವಿರುವ ಕಬ್ರಸ್ಥಾನ ಜಾಗದ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತರುವಂತೆ ಒತ್ತಾಯಿಸಿದರು. ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಸಿ. ಯೋಗೇಶ್ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಶ್ರೀಕಾಂತ್, ಮಂಜುನಾಥ್, ಮಂಜುನಾಥ್ ಗೌಡ, ಕಲಗೋಡು ರತ್ನಾಕರ್, ಕಲೀಂ, ವೈ.ಹೆಚ್. ನಾಗರಾಜ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಇದರೊಂದಿಗೆ ನಗರದ ವಿವಿಧ ಮಸೀದಿಗಳ ಅಧ್ಯಕ್ಷರು, ಮುಖಂಡರು, ಯುವಕರು ಹಾಗೂ ಸಮುದಾಯದ ಪ್ರಮುಖರು ಸೇರಿದಂತೆ ಸಾವಿರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಮುಸ್ಲಿಂ ಸಮುದಾಯದ ಅಂತಿಮ ಸಂಸ್ಕಾರಕ್ಕೆ ಕಬ್ರಸ್ಥಾನ ಅತ್ಯಗತ್ಯವಾಗಿದ್...