Posts

ಶಿವಮೊಗ್ಗದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

Image
ಶಿವಮೊಗ್ಗದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ ಶಿವಮೊಗ್ಗ : ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಿನಾಂಕ 14/09/2026 ರಂದು ಶಿವಮೊಗ್ಗ ನಗರದ ಅಣ್ಣಾನಗರ ಎಡಭಾಗದ ಚಾನಲ್ ರಸ್ತೆಯಲ್ಲಿ ಬಿಳಿ ಬಣ್ಣದ ಕಾರಿನಲ್ಲಿ ಇಬ್ಬರು ವ್ಯಕ್ತಿಗಳು ಗಾಂಜಾ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ದೊಡ್ಡಪೇಟೆ ಪೊಲೀಸ್ ಠಾಣೆಯ ಪಿಎಸ್ಐ ಮಂಜುನಾಥ ಎನ್.ಕೆ. ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ ಚೂಡಾಮಣಿ ಎಎಸ್ಐ, ಸಂದೀಪ್, ಗಣೇಶ್, ಮನೋಹರ ಹಾಗೂ ಗುರುನಾಯ್ಕ್ ಅವರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ತೌಫೀಕ್ ಅಹಮದ್ (33), ಟಿಪ್ಪು ನಗರ ಎಡಭಾಗ, ಶಿವಮೊಗ್ಗ ಟೌನ್ ಹಾಗೂ ಸೈಯ್ಯದ್ ಅಪ್ಸರ್ (26) , ಅಮೀರ್ ಜಾನ್ ಕಾಲೋನಿ, ಅನ್ವರ್ ಕಾಲೋನಿ, ಭದ್ರಾವತಿ, ಶಿವಮೊಗ್ಗ ಜಿಲ್ಲೆ ಇವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಸುಮಾರು ₹70,000 ಮೌಲ್ಯದ 1 ಕೆಜಿ 420 ಗ್ರಾಂ ಗಾಂಜಾ, ಹೊಂಡಾ ಜಾಜ್ ಕಾರು ಹಾಗೂ ₹300 ನಗದು ಹಣವನ್ನು ಪೊಲೀಸರು ಅಮಾನತ್ತುಪಡಿಸಿಕೊಂಡಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 320/2026, NDPS Act ಕಲಂ 8(c), 20(b)(II)B ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ವರದಿ ನದೀಮ್ ಕೆ ಎಂ

ತೀರ್ಥಹಳ್ಳಿಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಆರೋಪ!

Image
 ತೀರ್ಥಹಳ್ಳಿಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ಆರೋಪ! ಭಾನುವಾರ ರಜೆ ದಿನವೇ ಅಕ್ಕಿ ಲೋಡ್ ಮಾಡಲು ಯತ್ನ – ಲಾರಿ ಪೊಲೀಸರ ವಶಕ್ಕೆ ಶಿವಮೊಗ್ಗ : ಬಡವರಿಗೆ ವಿತರಿಸುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಲಾಗಿದೆ ಎಂಬ ಆರೋಪ ತೀರ್ಥಹಳ್ಳಿ ಪಟ್ಟಣದಲ್ಲಿ ಕೇಳಿಬಂದಿದೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ ರಸ್ತೆಯಲ್ಲಿರುವ ಸುವರ್ಣ ಸಹಕಾರ ಭವನದ ಪಕ್ಕದ ಅನ್ನಭಾಗ್ಯ ಅಕ್ಕಿ ಗೋದಾಮಿನಲ್ಲಿ ಭಾನುವಾರದಂದು ಅಕ್ಕಿ ಮೂಟೆಗಳನ್ನು ಖಾಸಗಿ ಲಾರಿಗೆ ಸ್ಥಳಾಂತರಿಸಲು ಯತ್ನಿಸಲಾಗಿದೆ ಎನ್ನಲಾಗಿದೆ. ಈ ಕುರಿತು ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಮಾಹಿತಿ ಆಧರಿಸಿ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ತೆರಳಿ ಅಕ್ಕಿ ತುಂಬಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಅಕ್ಕಿ ಸಾಗಾಟಕ್ಕೆ ಬಳಸಲಾಗುತ್ತಿದ್ದ ಲಾರಿಯನ್ನು ಪೊಲೀಸರು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಟೆಂಡರ್ ಲಾರಿ ಬಿಟ್ಟು ಬೇರೆ ಲಾರಿಯಲ್ಲಿ ಅಕ್ಕಿ ಲೋಡ್?   ಅನ್ನಭಾಗ್ಯ ಅಕ್ಕಿ ಸಾಗಾಟಕ್ಕೆ ಟೆಂಡರ್ ಪಡೆದಿರುವ ಲಾರಿಯನ್ನು ಬಿಟ್ಟು, ಗಂಗಾವತಿ ಮೂಲದ ಖಾಸಗಿ ಲಾರಿಯಲ್ಲಿ ಅಕ್ಕಿ ಲೋಡ್ ಮಾಡಲು ಯತ್ನಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಅಲ್ಲದೆ, ಸ್ಥಳೀಯರಲ್ಲದ ಹಮಾಲಿಗಳಿಂದ ಅಕ್ಕಿ ಮೂಟೆಗಳನ್ನು ಲೋಡ್ ಮಾಡಲಾಗುತ್ತಿತ್ತು ಎನ್ನಲಾಗಿದೆ. ಭಾನುವಾರ ರಜೆ ದಿನವಾಗಿರುವುದರಿಂದ ಯಾವುದೇ ಕಾರಣಕ್ಕೂ ಅಕ್ಕಿ ಸಾಗಾಟಕ್ಕೆ ಅವಕಾಶ ಇರಬಾರದು ಎ...

ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ

Image
  ಶಿವಮೊಗ್ಗ ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ ಮಹಿಳೆಯರ ಆರೋಗ್ಯ, ಸ್ವಚ್ಛತೆ ಹಾಗೂ ಆಸ್ಪತ್ರೆ ಸೌಲಭ್ಯಗಳ ಪರಿಶೀಲನೆ ಶಿವಮೊಗ್ಗ, ಸೆ.12 : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಶಿವಮೊಗ್ಗದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಹಾಗೂ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಹಿಳೆಯರಿಗೆ ಲಭ್ಯವಿರುವ ಆರೋಗ್ಯ ಸೇವೆಗಳು, ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಪರಿಶೀಲಿಸಿದರು. ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಮಹಿಳಾ ಮೆಡಿಸಿನ್ ಜನರಲ್ ವಾರ್ಡ್‌ಗೆ ಭೇಟಿ ನೀಡಿದ ಅವರು, ಒಳರೋಗಿಗಳು ಹಾಗೂ ಅವರ ಸಂಬಂಧಿಕರೊಂದಿಗೆ ನೇರವಾಗಿ ಮಾತನಾಡಿ ಆಸ್ಪತ್ರೆಯಲ್ಲಿ ದೊರೆಯುತ್ತಿರುವ ವೈದ್ಯಕೀಯ ಸೇವೆಗಳ ಬಗ್ಗೆ ಮಾಹಿತಿ ಪಡೆದರು. ಉಚಿತ ಔಷಧಿ ವಿತರಣೆ, ವೈದ್ಯರ ಲಭ್ಯತೆ, ಸಿಬ್ಬಂದಿಯ ನಡೆ-ನುಡಿ, ಕುಡಿಯುವ ನೀರು ಹಾಗೂ ಶೌಚಾಲಯಗಳ ಸ್ವಚ್ಛತೆ ಕುರಿತು ರೋಗಿಗಳಿಂದ ಮಾಹಿತಿ ಪಡೆದುಕೊಂಡರು. ಆಸ್ಪತ್ರೆಯಲ್ಲಿ ಅಗತ್ಯವಿರುವ ಔಷಧಿಗಳನ್ನು ಯಾವುದೇ ಕಾರಣಕ್ಕೂ ಹೊರಗಿನಿಂದ ತರಲು ಸೂಚಿಸಬಾರದು. ಆಸ್ಪತ್ರೆಯ ಈ-ಫಾರ್ಮಸಿ ಮೂಲಕವೇ ಔಷಧಿಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸ್ವಚ್ಛತೆ ಕೊರತೆ ಕಂಡು ಅಧಿಕಾರಿಗಳಿಗೆ ಸೂಚನೆ ಆಸ್ಪತ್ರೆಯ ಕೆಲವು ವಾರ್ಡ್‌ಗಳು ಹಾಗೂ ಶೌಚಾಲಯಗಳಲ್ಲಿ ಸೂಕ್ತ ಸ್ವಚ್ಛತೆ ಇಲ್ಲದಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ. ವಾರ್ಡ್‌ಗಳ ಹಿಂಭಾಗದ ಮುರಿದ ಕಿಟಕಿಗಳು...

ದೃಢ ಕರ್ನಾಟಕದ ಸಂಕಲ್ಪ: 100 ದಿನಗಳ ಯಶಸ್ವಿ ಪೂರೈಕೆ ಕಾರ್ಯಕ್ರಮ

Image
  ದೃಢ ಕರ್ನಾಟಕದ ಸಂಕಲ್ಪ: 100 ದಿನಗಳ ಯಶಸ್ವಿ ಪೂರೈಕೆ ಕಾರ್ಯಕ್ರಮ ಬೆಂಗಳೂರು: ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇಂದು ಆಯೋಜಿಸಲಾಗಿದ್ದ “ದೃಢ ಕರ್ನಾಟಕದ ಸಂಕಲ್ಪ – 100 ದಿನಗಳ ಯಶಸ್ವಿ ಪೂರೈಕೆ” ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ , ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸಚಿವರು, ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯದ ಆಡಳಿತ, ಅಭಿವೃದ್ಧಿ ಹಾಗೂ ಸರ್ಕಾರದ ವಿವಿಧ ಕಾರ್ಯಕ್ರಮಗಳ ಪ್ರಗತಿಯನ್ನು ಬಿಂಬಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಪ್ರಮುಖರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಿ, ರಾಜ್ಯದ ಅಭಿವೃದ್ಧಿ ಮತ್ತು ಮುಂದಿನ ಕಾರ್ಯಯೋಜನೆಗಳ ಕುರಿತು ಗಮನ ಹರಿಸಿದರು. “ದೃಢ ಕರ್ನಾಟಕದ ಸಂಕಲ್ಪ – 100 ದಿನಗಳ ಯಶಸ್ವಿ ಪೂರೈಕೆ” ಕಾರ್ಯಕ್ರಮವು ಸರ್ಕಾರದ ಕಾರ್ಯನಿರ್ವಹಣೆ ಹಾಗೂ ಸಾಧನೆಗಳನ್ನು ಜನರಿಗೆ ಪರಿಚಯಿಸುವ ಪ್ರಮುಖ ವೇದಿಕೆಯಾಗಿ ಗಮನ ಸೆಳೆಯಿತು.

ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ

Image
 ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಸಾಗರ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನೆಯ ಗಾಡ್ರೇಜ್‌ನಲ್ಲಿಟ್ಟಿದ್ದ ನಗದು ಹಣ ಕಳ್ಳತನ ಪ್ರಕರಣವನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಭೇದಿಸಿದ್ದಾರೆ. ಕಳುವಾಗಿದ್ದ ಹಣದಲ್ಲಿ ₹2,29,900 ನಗದನ್ನು ಆರೋಪಿಯಿಂದ ವಶಪಡಿಸಿಕೊಂಡಿದ್ದಾರೆ. ಸಾಗರದ ಅಣಲೆಕೊಪ್ಪ ನಿವಾಸಿ ಉಮಾ ಅವರು ಸೆಪ್ಟೆಂಬರ್ 6ರಂದು ತಮ್ಮ ಮನೆಯ ಗಾಡ್ರೇಜ್‌ನಲ್ಲಿ ಇಟ್ಟಿದ್ದ ₹2.54 ಲಕ್ಷ ನಗದು ಹಣ ಕಳ್ಳತನವಾಗಿದೆ ಎಂದು ಸಾಗರ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸಿಆರ್ ನಂ.175/2026ರಂತೆ ಬಿಎನ್‌ಎಸ್ ಕಲಂ 305, 306ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ., ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕಾರಿಯಪ್ಪ ಎ.ಜಿ. ಅವರ ಮಾರ್ಗದರ್ಶನದಲ್ಲಿ ಸಾಗರ ಉಪವಿಭಾಗದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ಬೆನಕಪ್ರಸಾದ್ ಎನ್.ಜೆ. ಅವರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಸಾಗರ ಪೇಟೆ ಠಾಣೆ ಪೊಲೀಸ್ ನಿರೀಕ್ಷಕ ಪುಲ್ಲಯ್ಯ ರಾಥೋಡ್ ಅವರ ನೇತೃತ್ವದಲ್ಲಿ ಪಿಎಸ್‌ಐ ಶಾಂತರಾಜ್ ಹಾಗೂ ಪೊಲೀಸ್ ಸಿಬ್ಬಂದಿ ತನಿಖೆ ನಡೆಸಿ, ಪ್ರಕರಣ ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಆರೋಪಿಯನ್ನು ಪಾಂಡುರಂಗ (35) ಎಂದು ಗುರುತಿಸಲಾಗಿದ್ದು, ಆತನಿಂದ ₹2,29,900 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸ...

ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಶಿವಮೊಗ್ಗ ಬಿಜೆಪಿಯ ಭರ್ಜರಿ ಪಾಲ್ಗೊಳ್ಳುವಿಕೆ

Image
    ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಶಿವಮೊಗ್ಗ ಬಿಜೆಪಿಯ ಭರ್ಜರಿ ಪಾಲ್ಗೊಳ್ಳುವಿಕೆ ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರ ಸಾರಥ್ಯದಲ್ಲಿ ರಾಯಚೂರಿನ ಲಿಂಗಸಗೂರಿನಿಂದ ಬಳ್ಳಾರಿವರೆಗೆ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆ ಸೋಮವಾರ ಯಶಸ್ವಿಯಾಗಿ 7ನೇ ದಿನಕ್ಕೆ ಕಾಲಿಟ್ಟಿತು. ಪೂರ್ವನಿಯೋಜಿತ ಕಾರ್ಯಕ್ರಮದಂತೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಜಗದೀಶ್ ಎನ್.ಕೆ. ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆಯಿಂದ 1,200ಕ್ಕೂ ಹೆಚ್ಚು ಪ್ರಮುಖ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದರು. ಸೋಮವಾರ ಮಧ್ಯಾಹ್ನ ಬಳ್ಳಾರಿ ಜಿಲ್ಲೆಯ ಕಂಪ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮೇಟ್ರಿಯಿಂದ ಹಳೆ ದರೋಜಿವರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೊಂದಿಗೆ ಶಿವಮೊಗ್ಗ ಜಿಲ್ಲೆಯ ಕಾರ್ಯಕರ್ತರು ಸುಮಾರು 10 ಕಿಲೋಮೀಟರ್‌ಗಳಷ್ಟು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ , ಜಿಲ್ಲಾಧ್ಯಕ್ಷರಾದ ಜಗದೀಶ್ ಎನ್.ಕೆ. , ವಿಧಾನಸಭಾ ಸದಸ್ಯರಾದ ಚನ್ನಬಸಪ್ಪ (ಚೆನ್ನಿ), ಆರಗ ಜ್ಞಾನೇಂದ್ರ , ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಭಾರತೀ ಶೆಟ್ಟಿ , ಮಾಜಿ ಶಾಸಕರಾದ ಅಶೋಕ್ ನಾಯ್ಕ್, ಹರತಾಳು ಹಾಲಪ್ಪ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಹ...

ಹಾಸ್ಟೆಲ್ ಊಟದ ಹಾಲ್‌ನಲ್ಲೇ ಬೀದಿ ನಾಯಿ! ಅಧಿಕಾರಿಗಳು ಕಕ್ಕಾಬಿಕ್ಕಿ

Image
 ಹಾಸ್ಟೆಲ್ ಊಟದ ಹಾಲ್‌ನಲ್ಲೇ ಬೀದಿ ನಾಯಿ! ಅಧಿಕಾರಿಗಳು ಕಕ್ಕಾಬಿಕ್ಕಿ ಶಿವಮೊಗ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದ ವೇಳೆ ಹಾಸ್ಟೆಲ್‌ನ ಊಟದ ಹಾಲ್‌ನಲ್ಲೇ ಬೀದಿ ನಾಯಿಯೊಂದು ಕಾಣಿಸಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಮಲ್ಲಿಗೇನಹಳ್ಳಿ ಬಡಾವಣೆಯಲ್ಲಿರುವ ದೇವರಾಜ ಅರಸು ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ತಹಶೀಲ್ದಾರ್ ರಾಜೀವ್ ನೇತೃತ್ವದ ತಂಡ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು . ಅಧಿಕಾರಿಗಳ ಭೇಟಿ ವೇಳೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದ ಸ್ಥಳದಲ್ಲೇ ಬೀದಿ ನಾಯಿ ಕಾಣಿಸಿಕೊಂಡಿದ್ದು, ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿದ್ದಾರೆ. ಈ ವೇಳೆ ಊಟ ಮಾಡುತ್ತಿದ್ದ ವಿದ್ಯಾರ್ಥಿಗಳೊಂದಿಗೆ ಅಧಿಕಾರಿಗಳು ಸಮಾಲೋಚನೆ ನಡೆಸಿ, ಹಾಸ್ಟೆಲ್‌ನಲ್ಲಿ ಊಟ ಸೇರಿದಂತೆ ಮೂಲಭೂತ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪರಿಶೀಲನೆ ಸಂದರ್ಭದಲ್ಲಿ ಹಾಸ್ಟೆಲ್‌ನಲ್ಲಿ ವಾರ್ಡನ್ ಇಲ್ಲದಿರುವುದು ತಹಶೀಲ್ದಾರ್ ರಾಜೀವ್ ಅವರ ಗಮನಕ್ಕೆ ಬಂದಿದ್ದು, ಇದಕ್ಕೆ ಅವರು ಗರಂ ಆಗಿದ್ದಾರೆ. ವಾರ್ಡನ್ ಇಲ್ಲದೇ ಊಟವನ್ನು ಯಾರು ಬಡಿಸುತ್ತಾರೆ? ಹಾಸ್ಟೆಲ್‌ನಲ್ಲಿ ಎಲ್ಲವೂ ಸರಿಯಾಗಿ ನಡೆಯುತ್ತಿದೆಯೇ? ಎಂದು ವಿದ್ಯಾರ್ಥಿಗಳನ್ನು ಪ್ರಶ್ನಿಸಿ ಮಾಹಿತಿ ಪಡೆದಿದ್ದಾರೆ. ಬಳಿಕ ವಾರ್ಡನ್‌ಗೆ ಫೋನ್ ಮಾಡಿ ಸ್ಥಳಕ್ಕೆ ಕರೆಸಿಕೊಂಡ ತಹಶೀಲ್ದಾರ್, ಹಾಸ್ಟೆಲ್‌ನಲ್ಲಿನ ಎಲ್ಲಾ ವ್ಯವಸ್ಥೆಗಳು ನಿಯಮಾನುಸಾರ ನಡೆಯಬೇಕು ಎಂದು ಎಚ್ಚರಿಕೆ ನೀಡಿ ವಾರ್ನಿಂಗ್ ...